ಕೋಲಾರ/ 02 ನರಸಾಪುರ ಭಾಗದ ಜನರ, ಕಾರ್ಮಿಕ, ಮಹಿಳಾ ಕಾರ್ಮಿಕರ ಬಹುದಿನಗಳ ಬೇಡಿಕೆಯಾದಂತಹ ನರಸಾಪುರ ಗ್ರಾಮದಲ್ಲಿ ಹೊಸ ಪೆÇಲೀಸ್ ಠಾಣೆಯನ್ನು ಮಂಜೂರು ಮಾಡುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರವರಲ್ಲಿ ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮನವಿ ನೀಡಿದರು.
ಕೋಲಾರಕ್ಕೆ ಬುಧವಾರ ಆಗಮಿಸಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರವರಿಗೆ ಮನವಿ ನೀಡಿ ಮನವಿಯಲ್ಲಿ
. ಕೋಲಾರ ತಾಲ್ಲೂಕು. ನರಸಾಪುರ ಕೈಗಾರಿಕಾ ಪ್ರದೇಶದ ಭಾಗದಲ್ಲಿ ಜನಸಂಖ್ಯೆ ಹೆಚ್ಚಾಗಿದ್ದು. ಹೊರ ರಾಜ್ಯಗಳಿಂದಲೂ ಸಹ ಜನ ಬಂದು ಇಲ್ಲೆ ವಾಸವಿದ್ದು ಕೆಲಸ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಕೈಗಾರಿಕಾ ಪ್ರದೇಶದಲ್ಲಿ ಮಹಿಳೆಯರು ಕರ್ತವ್ಯಕ್ಕೆ ಮೂರು ಪಾಳಿಗಳಲ್ಲಿ ಹಾಜರಾಗುತ್ತಿದ್ದು, ಈ ವೇಮಗಲ್ ಕೈಗಾರಿಕಾ ಪ್ರದೇಶಕ್ಕೆ ಹಾಗೂ ನರಸಾಪುರ ಕೈಗಾರಿಕೆ ಪ್ರದೇಶಕ್ಕೆ ವೇಮಗಲ್ ಒಂದೇ ಪೆÇಲೀಸ್ ಠಾಣೆ ಇದ್ದು, ವೇಮಗಲ್ ಠಾಣೆಗೆ 107 ಹಳ್ಳಿಗಳು ಸೇರುತ್ತವೆ. ಸಾರ್ವಜನಿಕರು ಸಹ ಹಲವಾರು ಕೆಲಸ ಕಾರ್ಯಗಳಿಗೆ ಠಾಣೆಗೆ ಬರುತ್ತಿದ್ದಾರೆ. ಸಿಬ್ಬಂದಿಯು ಕೊರತೆ ಸಹ ವೇಮಗಲ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚಾಗಿರುತ್ತದೆ. ವೇಮಗಲ್ ಠಾಣಾ ಅಧಿಕಾರಿಗಳಿಗೂ ಸಹ ಕೆಲಸ ಮಾಡುವ ಒತ್ತಡ ಹೆಚ್ಚಾಗಿರುತ್ತದೆ. ಮಟ್ಕ, ಗಾಂಜ, ಜೂಜು ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಬೆಂಗಳೂರಿಗೆ ಕೂಗಳತೆಯ ದೂರದಲ್ಲಿ ನರಸಾಪುರ ಕೈಗಾರಿಕಾ ಪ್ರದೇಶ ಸ್ಥಾಪನೆಯಾಗಿದೆ.
ಈ ಎಲ್ಲಾ ಘಟನೆಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಸದಾಗಿ ಪೆÇಲೀಸ್ ಠಾಣೆಯನ್ನು ಮಂಜೂರು ಮಾಡಿಕೊಟ್ಟು, ಈ ಭಾಗದ ಜನರಿಗೆ ಹಾಗೂ ಕೈಗಾರಿಕೆ ಪ್ರದೇಶದಲ್ಲಿ ಕಾರ್ಯನಿರ್ವಹಿಸು ಮಹಿಳಾ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಈ ಹಿಂದೆ ಇದ್ದಂತಹ ಸರ್ಕಾರದ ಅಂದಿನ ಗೃಹಮಂತ್ರಿಗಳಾದ ಆರ್.ಅಶೋಕ್ ರವರಿಗೆ ಮತ್ತು ಅರಗಜ್ಜಾನೇಂದ್ರ ರವರಿಗೆ ಮನವಿಗಳನ್ನು ಕೊಟ್ಟು ಕೇಳಿಕೊಂಡರೂ ಸಹ ಈ ಭಾಗದ ಜನರ ಬೇಡಿಕೆಯನ್ನು ಈಡೇರಿಸಿರುವುದಿಲ್ಲ. ಈಗಲಾದರೂ ತಾವುಗಳು ಈ ಜನರ ಬೇಡಿಕೆಗಳನ್ನು ಈಡೇರಿಸುತ್ತೀರೆಂಬ ನಂಬಿಕೆಯಿಂದ ಈ ಮನವಿ ಪತ್ರವನ್ನು ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಯುವ ಘಟದ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ, ಕೋಲಾರ ತಾಲ್ಲೂಕು ಅಧ್ಯಕ್ಷ ಜಗನ್ನಾಥರೆಡ್ಡಿ, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಕಾಡಕಚ್ಚನಹಳ್ಳಿ ವಿಶ್ವನಾಥಗೌಡ, ಮಾಲೂರು ತಾಲ್ಲೂಕು ಅಧ್ಯಕ್ಷ ತಿಪ್ಪಸಂದ್ರ ಹರೀಶ್ಗೌಡ, ಮುಖಂಡರುಗಳಾದ ಪ್ರಭು, ಸುರೇಂದ್ರ, ತೇರಹಳ್ಳಿ ಚಂದ್ರಪ್ಪ, ಮುಂತಾದವರು ಹಾಜರಿದ್ದರು.
Month: January 2024
ಯುವಜನತೆ ಈ ದೇಶದ ಆಸ್ತಿ ಅವರನ್ನು ಸರಿದಾರಿಯಲ್ಲಿ ನಡೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ : ಡಾ. ಜಿ. ಪರಮೇಶ್ವರ್
ಕೋಲಾರ : ಯುವಕ ಯುವತಿಯರು ಈ ದೇಶದ ಬಹು ದೊಡ್ಡ ಆಸ್ತಿ ಅವರನ್ನು ಸರಿದಾರಿಗೆ ನಡೆಸಿಕೊಂಡು ಹೋಗಬೇಕಾದ್ದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ. ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯ ಮಾಡುವುದು ಸರ್ಕಾರದ ಪ್ರಮುಖ ಗುರಿ ಎಂದು ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.
ಇಂದು ಬಂಗಾರಪೇಟೆ ತಾಲ್ಲೂಕಿನ ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬೂದಿಕೋಟೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಹೊಸ ಸರ್ಕಾರ ಬಂದ ನಂತರ ಕೋಲಾರ ಹಾಗೂ ಕೆಜಿಎಫ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಲು ನಿನ್ನೆ ತೀರ್ಮಾನ ಕೈಗೊಳ್ಳಲಾಯಿತು. ಇದರ ಭಾಗವಾಗಿ ಇಂದು ಬೂದಿಕೋಟೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಲಾಗುತ್ತಿದೆ.
ಈ ಹಿಂದೆ ಕೆಜಿಎಫ್ ಪೊಲೀಸ್ ಜಿಲ್ಲಾ ವ್ಯಾಪ್ತಿಯ ಮಾರಿಕುಪ್ಪಮ್ ಠಾಣೆಯನ್ನು ಇತ್ತೀಚೆಗೆ ಇತಿಹಾಸ ಪ್ರಸಿದ್ಧ ಬೂದಿಕೋಟೆಗೆ ಸ್ಥಳಾಂತರಿಸಲಾಗಿದೆ. ಇಲ್ಲಿ ಅಪರಾಧಗಳ ಸಂಖ್ಯೆ ಕಡಿಮೆ ಇದೆ, ಈ ಭಾಗದ ಜನ ಕಾನೂನು ಪಾಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಸಂತೋಷವಾಯಿತು ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಹಳ ಶಿಸ್ತಿನಿಂದ ಕೆಲಸ ಮಾಡುತ್ತಿದೆ. ಕೋಲಾರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಲ್ಲಿ ಕೆಲವೇ ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸಲಾಗುತ್ತಿದೆ ಇದು ರಾಜ್ಯದ ಇತರೆ ಜಿಲ್ಲೆಗಳಿಗೆ ಮಾದರಿ ಎಂದು ತಿಳಿಸಿದರು.
ಪೊಲೀಸರು ಬಹಳ ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ, ಈವರೆಗೆ ಅವರು ವಾಸ ಮಾಡುವ ವಸತಿ ಗೃಹಗಳು ಸಹ ಅಷ್ಟೇನು ಚೆನ್ನಾಗಿರಲಿಲ್ಲ, ಇದನ್ನು ಗಮನಿಸಿದ ನಾನು ಮೊದಲ ಬಾರಿಗೆ ಗೃಹಮಂತ್ರಿ ಆಗಿದ್ದಾಗ ಹತ್ತು ಸಾವಿರ ಮನೆಗಳನ್ನು ಮಂಜೂರು ಮಾಡಿದೆ. ಈಗಲೂ ಇನ್ನಷ್ಟು ವಸತಿ ಗೃಹಗಳು ನಿರ್ಮಾಣ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಗೂ ಕ್ವಾರ್ಟಸ್್ರ ಮಂಜೂರು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬೂದಿಕೋಟೆಗೆ ಇಪ್ಪತ್ತು ನಾಲ್ಕು ವಸತಿ ಗೃಹಗಳು ಹಾಗೂ ಕೆಜಿಎಫ್ ಪೊಲೀಸ್ ಜಿಲ್ಲೆಗೂ ಸಹ ವಸತಿ ಗೃಹಗಳನ್ನು ಮಂಜೂರು ಮಾಡಲಾಗುವುದು ಎಂದರು.
ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ಮಾಡದಿದ್ದರೆ, ಸರ್ಕಾರ ಜವಾಬ್ದಾರಿ ಆಗುತ್ತದೆ, ಅದರಲ್ಲೂ ಗೃಹ ಸಚಿವರು ಹೊಣೆಗಾರಿಕೆ ಹೊರಬೇಕಾಗುತ್ತದೆ ಎಂದರು.
ಕರ್ನಾಟಕ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಕಳೆದ ವರ್ಷದಲ್ಲಿ ರಾಜ್ಯದಲ್ಲಿ ನೂರು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದರು. ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ ರವರು ಮಾತನಾಡಿ, ಡಾ.ಪರಮೇಶ್ವರ್ ರವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಆಸೆಯಿತ್ತು, ಈಗಲೂ ಸಮಯವಿದೆ ಅವರು ಮುಂದೆ ಮುಖ್ಯಮಂತ್ರಿ ಆಗುವ ಅವಕಾಶ ಇದೆ. ನಮ್ಮ ಕೋರಿಕೆಯ ಮೇರೆಗೆ ಬೂದಿಕೋಟೆ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಮಾಡಿ ಇಂದು ಲೋಕಾರ್ಪಣೆ ಮಾಡಿದ್ದಾರೆ. ಈ ಹಿಂದೆ ಗೃಹಮಂತ್ರಿ ಆಗಿದ್ದಾಗ ಪೊಲೀಸ್ ವಸತಿ ನಿಲಯಗಳ ನಿರ್ಮಾಣ ಮಾಡಿದ್ದರು, ಈಗಲೂ ಸಿಬ್ಬಂದಿಯ ಕೊರತೆ ಇದೆ, ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುವ ಪೊಲೀಸರಿಗೆ ವಸತಿ ಸಮುಚ್ಚಯ ನಿರ್ಮಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಕಲಾ ಎಂ ಶಶಿಧರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಕರ್ನಾಟಕ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಕರ್ಯಗಳ ನಿಗಮದ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಡಿಜಿಪಿ ಡಾ.ಕೆ.ರಾಮಚಂದ್ರರಾವ್, ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಬಂಗಾರಪೇಟೆ ತಹಶೀಲ್ದಾರ್ ರಶ್ಮಿ, ಬೂದಿಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಆರಾಧ್ಯ ಮಠದಲ್ಲಿ ನೆಲೆಸಿರುವ ಬಡ ಕ್ಲಾರೆಸ್ ಇಬ್ಬರು ಸಹೋದರಿಯರ ಭಗಿನಿ ವೃತ್ತಿ ಸ್ವೀಕಾರ/ Mangalore: The sisters of Poor Clares residing at Adoration monastery received profession
ಮಂಗಳೂರು: ಮಿಲಾಗ್ರೆಸ್ ಸಮೀಪದ ಆರಾಧ್ಯ ಮಠದಲ್ಲಿ ನೆಲೆಸಿರುವ ಬಡ ಕ್ಲಾರೆಸ್ ನ ಸಹೋದರಿಯರು ತಮ್ಮ ಇಬ್ಬರು ಸಹೋದರಿಯರಾದ ಶ್ರೀ ಮೇರಿ ಮತ್ತು ಸೀನಿಯರ್ ಫಿಲೋಮಿನಾ ಅವರು ಪಟ್ಟಾಭಿಷೇಕಗೊಂಡಿರುವುದನ್ನು ನೋಡಿ ಸಂತೋಷಪಟ್ಟರು ಮತ್ತು ಶ್ರೀ ಮೇರಿ ಫ್ರಾನ್ಸಿನಾ ಅವರು 3 ಜನವರಿ 2024 ರಂದು ಮೊದಲ ವೃತ್ತಿಯನ್ನು ಪಡೆದರು. ಮಂಗಳೂರಿನ ಬಿಷಪ್ ಗೌರವಾನ್ವಿತ ರೆವ್ ಡಾ ಅಲೋಶಿಯಸ್ ಪೌಲ್ ಡಿಸೋಜಯಸ್. ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು. ಸೇಂಟ್ ಆನ್ಸ್ ಫ್ರೈರಿಯ ರೆವ್ ಫಾದರ್ ರಾಕಿ ಡಿ’ಕುನ್ಹಾ ಅವರು ಸಭೆಗೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಹೊಸದಾಗಿ ಪ್ರತಿಪಾದಿಸಿದ ಮತ್ತು ಪಟ್ಟಭದ್ರರಿಗೆ ಶುಭ ಹಾರೈಸಿದರು.
Mangalore: The sisters of Poor Clares residing at Adoration monastery received first profession
The sisters of Poor Clares residing at Adoration monastery near Milagres were happy to see their two sisters namely Sr Mary and Sr Philomena got vested and Sr Mary Francina received first profession on 3rd January 2024. Bishop emeritus of Mangalore Most Rev Dr Aloysius Paul D’Souza officiated the Holy Eucharist. Rev Fr Rocky D’Cunha superior of St Anne’s friary thanked the congregation and wished well to the newly professed and vested.
ಶ್ರೀನಿವಾಸಪುರದ ಪುರಸಭೆ ಕಾರ್ಯಾಲಯದಲ್ಲಿ ಜಕಣಾಚಾರಿ ಜಯಂತಿ
ರೇಣುಕಾ ಯಲ್ಲಮ್ಮ ದೇವಿ ವಿಶೇಷ ಪೂಜಾ ಮಹೋತ್ಸವದ ಅಂಗವಾಗಿ ಅನ್ನಸಂತರ್ಪಣೆ
ಶಿಲ್ಪಿ ಜಕಣಾಚಾರಿ ಅವರಿಂದ ಕೆತ್ತಲ್ಪಟ್ಟಿರುವ ಶಿಲ್ಪಗಳು ಇಂದಿಗೂ ಜನರ ಮೆಚ್ಚುಗೆಗೆ ಪಾತ್ರವಾಗಿವೆ : ಉಪ ತಹಶೀಲ್ದಾರ್ ಕೆ.ಎಲ್.ಜಯರಾಂ
ಶ್ರೀನಿವಾಸಪುರ: ಶಿಲ್ಪಿ ಜಕಣಾಚಾರಿ ಅವರಿಂದ ಕೆತ್ತಲ್ಪಟ್ಟಿರುವ ಶಿಲ್ಪಗಳು ಇಂದಿಗೂ ಜನರ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ಉಪ ತಹಶೀಲ್ದಾರ್ ಕೆ.ಎಲ್.ಜಯರಾಂ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ, ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಜಯಂತಿ ಸಮಾರಂಭದಲ್ಲಿ ಜಕಣಾಚಾರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕರ್ನಾಟಕ ಕಲೆಯ ತೊಟ್ಟಿಲಾಗಲು ಜಕಣಾಚಾರಿ ಅವರಂಥ ಶಿಲ್ಪಿಗಳು ಕಾರಣರಾಗಿದ್ದಾರೆ ಎಂದು ಹೇಳಿದರು.
ವಾಸ್ತು ಶಿಲ್ಪ ಕಲಾ ಪ್ರಕಾರಕ್ಕೆ ಜಕಣಾಚಾರಿ ಮಾದರಿಯಾಗಿದ್ದಾರೆ. ಅವರ ಪರಂಪರೆ ರಾಜ್ಯದಲ್ಲಿ ಇನ್ನೂ ಮುಂದುವರಿದಿದರುವುದು ಹೆಮ್ಮೆಯ ಸಂಗತಿಯಾಗಿದೆ. ವಿಶ್ವಕರ್ಮ ಸಮುದಾಯ ಜಕಣಾಚಾರಿ ಅವರ ಆದರ್ಶದ ಬೆಳಕಲ್ಲಿ ಕಾರ್ಯನಿರ್ವಹಿಸಬೇಕು. ಕಲಾ ತಪಸ್ವಿಯಾದ ಜಕಣಾಚಾರಿ ಕಲಾ ಪ್ರಪಂಚದಲ್ಲಿ ಇಂದಿಗೂ ಜೀವಂತವಾಗಿದ್ದಾರೆ ಎಂಬುದನ್ನು ರುಜುವಾತು ಮಾಡಬೇಕು ಎಂದು ಹೇಳಿದರು.
ಶಿರಸ್ತೇದಾರ್ ಬಲರಾಮಚಂದ್ರೇಗೌಡ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಕೃಷ್ಣಪ್ಪ, ಕೆ.ಸಿ.ಮಂಜುನಾಥ್, ಎಸ್.ಜನಾರ್ಧನ್, ಗುರುರಾಜರಾವ್, ದಿನೇಶ್, ಹರಿ, ಎನ್.ಶಂಕರ್, ನರಸಿಂಹಮೂರ್ತಿ, ವಿಶ್ವನಾಥ್, ಶೈಲ, ನಿರ್ಮಲ, ಶಿಲ್ಪ, ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ, ರವಿಚಂದ್ರಾಚಾರಿ, ರಾಮಚಂದ್ರಾಚಾರಿ, ಮಂಜುನಾಥ್ ಇದ್ದರು.
ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಪಿ ಅನಾವರಣ – ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿ: ನಳಿನ್ ಕುಮಾರ್
ಮಂಗಳೂರು: ಬಂದರು, ವಿಮಾನಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ನಗರದ ಓಷಿಯನ್ ಪರ್ಲ್ ಹೊಟೇಲ್ ಮಂಗಳವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜ.5ರಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ. ಪ್ರಾಂಜಲ್ ಗೌರವಾರ್ಥ ನಡೆಯಲಿರುವ `ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ ಟ್ರೋಪಿ ಅನಾವರಣಗೊಳಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿಭಿನ್ನತೆಯೇನೆಂದರೆ ಸಾಂಸ್ಕೃತಿಕ, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳು ಮುಂದುವರಿದಿದ್ದು, ದೇಶದಲ್ಲಿ ಇಂತಹ ಸ್ವಚ್ಛ, ಸೌಹಾರ್ದತೆಯ ಮತ್ತೊಂದು ನಗರವನ್ನು ಕಾಣಲು ಸಾಧ್ಯವಿಲ್ಲ. ಇಂತಹ ನಾಡಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವುದು ಬ್ರ್ಯಾಂಡ್ ಮಂಗಳೂರಿಗೆ ಮತ್ತಷ್ಟು ಪೂರಕ ಎಂದರು.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, 4ವರ್ಷದ ಹಿಂದೆ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವನ್ನು ಯಶಸ್ವಿö, ಮಾದರಿಯಾಗಿ ನಡೆಸಿದ ಹೆಗ್ಗಳಿಕೆ ಪಡೆದುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಸಂಘಕ್ಕೆ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದ ಅವಕಾಶ ಸಿಕ್ಕಿರುವುದು ನಿಜಕ್ಕೂ ನಮಗೆ ಹೆಮ್ಮೆ. ಕ್ರಿಕೆಟ್ ಪಂದ್ಯಾಟ ಹಾಗೂ ಪತ್ರಕರ್ತರ ಮಹಾಸಭೆಗೆ ರಾಜ್ಯದ ನಾನಾ ಜಿಲ್ಲೆಯಿಂದ ಬರುವ 600ಕ್ಕೂ ಅಧಿಕ ಪತ್ರಕರ್ತರು ಆಗಮಿಸುತ್ತಿದ್ದು ಅವರಿಗೆ ಆತಿಥ್ಯ ಸೇರಿದಂತೆ ಯಶಸ್ವಿ ಕ್ರೀಡಾಕೂಟ ಆಯೋಜಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ಕುಟ್ಟಪ್ಪ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿದ್ದರು.
ಪ್ರೆಸ್ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ. ಭಟ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಧನ್ಯವಾದವಿತ್ತರು.
ಉದ್ಯಮದಲ್ಲಿ ತೊಡಗಿಸಿಕೊಂಡ ನಾವು ದೇಶ-ವಿದೇಶಗಳಲ್ಲಿ ಸುತ್ತಾಡುತ್ತೇವೆ. ಆದರೆ ಕಲೆ, ಸಂಸ್ಕೃತಿ, ಧಾರ್ಮಿಕ ನಂಬಿಕೆ, ಸಹಬಾಳ್ವೆಯಂತಹ ಇಂತಹ ನಗರವನ್ನು ಮತ್ತೊಂದು ಕಡೆ ಕಾಣಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಈ ಜಗತ್ತಿನ ಸ್ವರ್ಗ ಎಂದು ರೋಹನ್ ಕಾರ್ಪೊರೇಷನ್ ಛೇರ್ಮನ್ ರೋಹನ್ ಮೊಂತೆರೋ ಹೇಳಿದರು. ಪತ್ರಕರ್ತರ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆ ನಿಜಕ್ಕೂ ಚೆನ್ನಾಗಿದ್ದು, ಈ ಶೀರ್ಷಿಕೆಯಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಪತ್ರಕರ್ತರು ಬರುವ ಕಾರಣ ಮಂಗಳೂರಿನ ಬ್ರ್ಯಾಂಡ್ ಮತ್ತಷ್ಟು ವ್ಯಾಪ್ತಿಗೆ ಪಸರಿಸಲಿ. ಈ ಕ್ರೀಡಾಕೂಟಕ್ಕೆ ಟೈಟಲ್ ಪ್ರಾಯೋಜಕರಾಗಿ ಭಾಗವಹಿಸುವುದಕ್ಕೆ ನಮಗೂ ಹೆಮ್ಮೆ ಎನಿಸುತ್ತಿದೆ ಎಂದರು.
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸ್ಕೂಟರ್ ಸಮೇತ ನೀರಿಗೆ ಬಿದ್ದ ಸವಾರ ನಾಪತ್ತೆ – ಸ್ಕೂಟರ್ ಮಾತ್ರ ಪತ್ತೆ
ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಆಕಸ್ಮಿಕವಾಗಿ ಓರ್ವ ಸ್ಕೂಟರ್ ಸಮೇತನಾಗಿ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದಾರೆ. ಆತ ತಮಿಳುನಾಡು ಮೂಲದ ಮೀನುಗಾರನಾಗಿದ್ದು ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ.
ನೀರಿಗೆ ಬಿದ್ದ ಮಾಹಿತಿ ತಿಳಿದು ತತ್ಕ್ಷಣ ಈಶ್ವರ್ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಗಲಿಲ್ಲ. ಅದರೆ ಅತನ ಸ್ಕೂಟರ್ನ್ನು ಮಾತ್ರ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆ ತಂದಿದ್ದಾರೆ.
ಕ್ರೀಡಾಪಟುಗಳು ಜೀವನದ ಎಲ್ಲಾ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸುತ್ತಾರೆ-ಗೌತಮ್ ಶೆಟ್ಟಿ
ಕೋಟ-ಯುವ ಕ್ರಿಕೆಟಿಗ,ಕ್ರೀಡಾ ಸಂಘಟಕ ನಿತೇಶ್ ಶೆಟ್ಟಿ ಇವರ ಸಾರಥ್ಯದಲ್ಲಿ ರಾಷ್ಟ್ರೀಯ ಮಟ್ಟದ ಅದ್ಧೂರಿಯ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಪಾಂಚಜನ್ಯ ಟ್ರೋಫಿ-2023 ಇತ್ತೀಚಿಗೆ ಕೋಟ ಗಿಳಿಯಾರು ಶಾಂಭವಿ ಶಾಲಾ ಮೈದಾನದಲ್ಲಿ ಜರುಗಿತು. ಕುಂದಾಪುರ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಹಾಗೂ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷ ಗೌತಮ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗೌತಮ್ ಶೆಟ್ಟಿ “ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಬದುಕಿನಲ್ಲಿ ಎಂತಹ ಪರಿಸ್ಥಿತಿಯಲ್ಲೂ ಧೃತಿಗೆಡದೆ ಸಮರ್ಥವಾಗಿ ನಿಭಾಯಿಸುತ್ತಾರೆ. ಪಾಂಚಜನ್ಯದ ನಿತೇಶ್ ಶೆಟ್ಟಿ ಉತ್ತಮ ಸಂಘಟಕರು, ಕ್ರಿಕೆಟ್ ಗೆ ಹೊಸ ಆಯಾಮ ನೀಡುವದರಲ್ಲಿ ನಿಸ್ಸೀಮರು.ಈ ಬಾರಿಯೂ ಪಂದ್ಯಾವಳಿಗೆ ಹೊಸ ಸ್ಪರ್ಶ ನೀಡಿದ್ದಾರೆ.” ಸಂಘಟಕರಾದ ನಿತೇಶ್ ಹಾಗೂ ಪಾಂಚಜನ್ಯದ ತಂಡವನ್ನು ಅಭಿನಂದಿಸಿ ಶುಭ ಹಾರೈಸಿದರು.