ಬಜ್ಜೋಡಿಯ ಇನ್‌ಫೆಂಟ್ ಮೇರಿ ಚರ್ಚ್‌ನಲ್ಲಿ ಗರಿಗಳ ಭಾನುವಾತ ಆಚರಿಸಲಾಯಿತು / Palm Sunday was celebrated at Infant Mary church, Bajjodi

ಭಂಡಾರ್ಕಾರ್ಸ್ ಪದವಿ ಕಾಲೇಜಿನ “ವಾರ್ಷಿಕೋತ್ಸವ” 26,27,28 ಮಾರ್ಚ್ 2024ರಂದು ನಡೆಯಲಿದೆ

ಕೋಲಾರ: ಜಿಲ್ಲಾದ್ಯಂತ 65 ಕೇಂದ್ರಗಳಲ್ಲಿ ಮಾ.25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ10589 ಬಾಲಕರು ,9890ಬಾಲಕಿಯರು ಸೇರಿ ಒಟ್ಟು 20479 ಮಂದಿ ನೋಂದಣಿ-ಕೃಷ್ಣಮೂರ್ತಿ

ಕೋಲಾರ:- ಜಿಲ್ಲಾದ್ಯಂತ ಮಾ.25 ರಿಂದ ಏ.6ರವರೆಗೂ 65 ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 10589 ಮಂದಿ ಬಾಲಕರು,9890 ಮಂದಿ ಬಾಲಕಿಯರು ಸೇರಿದಂತೆ ಒಟ್ಟು 20479 ವಿದ್ಯಾರ್ಥಿಗಳು ಕುಳಿತಿದ್ದು,ಸುಗಮ ಪರೀಕ್ಷೆಗೆ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಮಾರ್ಗದರ್ಶನದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಶನಿವಾರವೇ ಜಿಲ್ಲೆಯ ಎಲ್ಲಾ 65 ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷರ ಅಧ್ಯಕ್ಷತೆಯಲ್ಲಿ ಆಯಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಕೊಠಡಿ ಮೇಲ್ವಿಚಾರಕರು ಮತ್ತು ಸಿಬ್ಬಂದಿಯ ಸಭೆಯನ್ನು ನಡೆಸಿ ಸುಗಮ ಪರೀಕ್ಷೆಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದರು.
ಹೊಸದಾಗಿ ಪರೀಕ್ಷೆ ತೆಗೆದುಕೊಂಡಿರುವ ಶಾಲಾ ವಿದ್ಯಾರ್ಥಿಗಳು 19892 ಮಂದಿ, ಹೊಸ ಖಾಸಗಿ ಅಭ್ಯರ್ಥಿಗಳು 100, ಸಿಸಿಇ ಪುನರಾವರ್ತಿತ ಅಭ್ಯರ್ಥಿಗಳು 349, ಸಿಸಿಇ ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು 127, ಹೊಸ ಸ್ಕೀಂ ಪುನರಾವರ್ತಿತ ಅಭ್ಯರ್ಥಿಗಳು 10 ಹಾಗೂ ನ್ಯೂಸ್ಕೀಂ ಖಾಸಗಿ ಅಭ್ಯರ್ಥಿ ಒಬ್ಬರು ಮಾತ್ರ ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.


ತಾಲ್ಲೂಕುವಾರು ಕೇಂದ್ರಗಳ ವಿವರ


ಬಂಗಾರಪೇಟೆ ತಾಲ್ಲೂಕಿನ 8 ಕೇಂದ್ರಗಳಲ್ಲಿ ಒಟ್ಟು 2717 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಕೆಜಿಎಫ್ ತಾಲ್ಲೂಕಿನ 9 ಕೇಂದ್ರಗಳಲ್ಲಿ 3423 ವಿದ್ಯಾರ್ಥಿಗಳು, ಕೋಲಾರದ 18 ಕೇಂದ್ರಗಳಲ್ಲಿ 5178 ಮಂದಿ, ಮಾಲೂರಿನ 8 ಕೇಂದ್ರಗಳಲ್ಲಿ3348 ಮಂದಿ, ಮುಳಬಾಗಿಲಿನ 12 ಕೇಂದ್ರಗಳಲ್ಲಿ 3234 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 10 ಕೇಂದ್ರಗಳಲ್ಲಿ 2579 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, ಅಗತ್ಯ ಸಿದ್ದತೆ ಮಾಡಲಾಗಿದೆ ಎಂದು ತಿಳಿಸಿ, ಜಿಲ್ಲೆಯ ಒಟ್ಟು 65 ಪರೀಕ್ಷಾ ಕೇಂದ್ರಗಳ ಪೈಕಿ ಗ್ರಾಮೀಣ ಕೇಂದ್ರಗಳು 35, ನಗರ ಕೇಂದ್ರಗಳು 30 ಇದೆ ಎಂದರು.


ಪರೀಕ್ಷಾ ಕಾರ್ಯಕ್ಕೆ 2250 ಮಂದಿ ನೇಮಕ


ಜಿಲ್ಲೆಯ ಆರು ಕ್ಷೇತ್ರ ವಲಯಗಳಿಗೆ ಸಂಬಂಧಿಸಿದಂತೆ ಎಲ್ಲಾ ತಾಲ್ಲೂಕಿನಲ್ಲಿ ಸುಗಮ ಪರೀಕ್ಷೆಗಾಗಿ ಜಿಲ್ಲೆಯ ಎಲ್ಲಾ 65 ಕೇಂದ್ರಗಳಲ್ಲೂ ಪರೀಕ್ಷೆ ಸುಗಮವಾಗಿನಡೆಯಲು 65 ಮಂದಿ ಮುಖ್ಯ ಅಧೀಕ್ಷಕರು, 65 ಮಂದಿ ಅಭಿರಕ್ಷರು,ಪ್ರತಿ ಕೇಂದ್ರಕ್ಕೆ ತಲಾ ಒಬ್ಬರು ಸ್ಥಾನಿಕ ಜಾಗೃದಳ ಸಿಬ್ಬಂದಿ, ಕೊಠಡಿ ಮೇಲ್ವಿಚಾರಕರು ಸೇರಿದಂತೆ 2250 ಮಂದಿಯನ್ನು ನೇಮಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಶ್ನೆಪತ್ರಿಕೆಗಳನ್ನು ಕೇಂದ್ರಕ್ಕೆ ತಲುಪಿಸಲು ಹಾಗೂ ಪರೀಕ್ಷೆ ನಂತರ ಉತ್ತರ ಪತ್ರಿಕೆಗಳನ್ನು ಡಿಡಿಪಿಐ ಕಚೇರಿಗೆ ತಲುಪಿಸಲು 28 ಮಾರ್ಗಗಳಿಗೆ ತಂಡಗಳನ್ನು ನೇಮಿಸಿರುವುದಾಗಿ ತಿಳಿಸಿದರು.


ಕೇಂದ್ರ ಪ್ರವೇಶಿಸಲು ಗುರುತಿನ ಚೀಟಿ ಕಡ್ಡಾಯ


ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ವಾಟರ್‍ಬಾಯ್‍ಯಿಂದ ಮುಖ್ಯ ಅಧೀಕ್ಷಕರವರೆಗೂ ಎಲ್ಲರಿಗೂ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯೇ ಗುರುತಿನ ಚೀಟಿ ಮುದ್ರಿಸಿ ಕಳುಹಿಸಿದೆ, ಗುರುತಿನ ಚೀಟಿ ಎಲ್ಲದೇ ಯಾರಿಗೂ ಒಳಗೆ ಪ್ರವೇಶ ನೀಡಬಾರದು ಎಂದು ತಿಳಿಸಲಾಗಿದೆ ಎಂದರು.
ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ.ವ್ಯಾಪ್ತಿಯಲ್ಲಿ 144 ನೇ ಸೆಕ್ಷನ್ ಅನ್ವಯ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆಂದು ತಿಳಿಸಿದರು.
ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಈ 200 ಮೀ ವ್ಯಾಪ್ತಿಯಲ್ಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ ಎಂದು ವಿವರ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಜಿಲ್ಲೆಯ ಎಲ್ಲಾ 65 ಕೇಂದ್ರಗಳಲ್ಲೂ ಕೊಠಡಿ, ಪೀಠೋಪಕರಣ, ಕುಡಿಯುವ ನೀರು, ಶೌಚಾಲಯ ಸೌಲಭ್ಯಗಳ ಕುರಿತು ನಿಗಾ ವಹಿಸಿದ್ದು, ಯಾವುದೇ ಸಮಸ್ಯೆಗಳಿಗೆ ಅವಕಾಶವಿಲ್ಲದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.


ಪರೀಕ್ಷಾಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಸೌಲಭ್ಯ


ಜಿಲ್ಲೆಯ ಎಲ್ಲಾ 65 ಪರೀಕ್ಷಾ ಕೇಂದ್ರಗಳಲ್ಲಿಯೂ ಪರೀಕ್ಷೆ ನಡೆಯುವ ಮಾ.25 ರಿಂದ ಏ.6 ರವರೆಗೂ ಒಬ್ಬೊಬ್ಬ ಶುಶ್ರೂಷಕಿಯನ್ನು ನೇಮಿಸಿ ಪ್ರಥಮ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದ್ದು, ಈ ಕಾರ್ಯಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದರು.
ಇದರ ಜತೆಗೆ ಪ್ರತಿ ಕೇಂದ್ರಕ್ಕೂ ಪರೀಕ್ಷೆ ನಡೆಯುವಾಗ ಭದ್ರತೆಗಾಗಿ ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಒದಗಿಸಲು ಜಿಲ್ಲಾಧಿಕಾರಿಗಳ ಸೂಚನೆಯಂತೆ ಕ್ರಮವಹಿಸಲಾಗಿದೆ ಎಂದರು.


ಮೊಬೈಲ್ ನಿಷಿದ್ದ ಸ್ವಾಧೀನಾಧಿಕಾರಿ ನೇಮಕ


ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಉಳಿದೆಲ್ಲಾ ಸಿಬ್ಬಂದಿ ಮೊಬೈಲ್ ಬಳಸದಿರುವಂತೆ ಕಟ್ಟಪ್ಪಣೆ ವಿಧಿಸಲಾಗಿದೆ. ಮುಖ್ಯ ಅಧೀಕ್ಷಕರು ಕೊಠಡಿ ಮೇಲ್ವಿಚಾರಕರು ಮೊಬೈಲ್ ತಂದಿದ್ದರೆ ಸ್ವಿಚ್ ಆಫ್ ಮಾಡಿಸಿ ವಶಕ್ಕೆ ಪಡೆಯಲು ಸೂಚಿಸಿದ್ದು, ಪ್ರತಿಕೇಂದ್ರಕ್ಕೂ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ವಿದ್ಯಾರ್ಥಿಗಳೂ ಸಹಾ ಮೊಬೈಲ್, ಎಲೆಕ್ಟ್ರಾನಿಕ್ ಗಡಿಯಾರ, ಉಪಕರಣಗಳನ್ನು ಕೇಂದ್ರದೊಳಕ್ಕೆ ತರಬಾರದು, ಕೇಂದ್ರದ ಮುಖ್ಯ ದ್ವಾರದಲ್ಲೇ ಈ ಸಂಬಂಧ ಪರಿಶೀಲಿಸಿ ಒಳ ಬಿಡುವಂತೆ ಪರೀಕ್ಷಾ ಮಂಡಳಿ ಸೂಚಿಸಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿ ಸಮುದಾಯ ವದಂತಿಗಳಿಗೆ ಕಿವಿಗೊಡದೇ, ಖಿನ್ನರಾಗದೇ ವಿಚಲಿತರಾಗದೇ ಪರೀಕ್ಷೆ ಬರೆದು ಗುಣಾತ್ಮಕ ಫಲಿತಾಂಶದ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ತರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಪರವಾಗಿ ಡಿಡಿಪಿಐ ಕೃಷ್ಣಮೂರ್ತಿ, ಪರೀಕ್ಷಾ ನೋಡೆಲ್ ಅಧಿಕಾರಿ ಕೃಷ್ಣಪ್ಪ, ಶಿಕ್ಷಣಾಧಿಕಾರಿಗಳಾದ ಸಗೀರಾ ಅಂಜುಂ,ಭಾಗ್ಯವತಮ್ಮ, ಡಿವೈಪಿಸಿಗಳಾದ ಚಂದ್ರಕಲಾ, ಗುರುಮೂರ್ತಿ, ಬಿಇಒಗಲಾದ ಕನ್ನಯ್ಯ, ಗಂಗರಾಮಯ್ಯ, ಮುನಿವೆಂಕಟರಾಮಾಚಾರಿ, ಚಂದ್ರಕಲಾ, ಸುಕನ್ಯಾ, ಮುನಿಲಕ್ಷ್ಮಯ್ಯ,ಎವೈಪಿಸಿ ಮೋಹನ್‍ಬಾಬು, ವಿಷಯ ಪರೀಕ್ಷಕರಾದ ಶಶಿವಧನ, ಗಾಯತ್ರಿ, ಶಂಕರೇಗೌಡ, ವೆಂಕಟೇಶಬಾಬು, ಪತ್ರಾಂಕಿತ ಸಹಾಯಕ ಪ್ರಸಾದ್‍ಬಾಬು ಮತ್ತಿತರರು ಶುಭ ಹಾರೈಸಿದ್ದಾರೆ.

ಕರ್ನಾಟಕ ಪ್ರಿಂಟರ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಅಧ್ಯಕ್ಷರಾಗಿ ಅಬ್ಬಣಿ ಶಂಕರ್, ಉಪಾಧ್ಯಕ್ಷರಾಗಿ ಶಿವರಾಮ್ ಆಯ್ಕೆ

ವಿದ್ಯೆಯನ್ನು ಯಾರು ಶ್ರದ್ಧೆಯಿಂದ ಶ್ರಮವಹಿಸಿ ವಿದ್ಯೆಯನ್ನು ಕಲಿಯುತ್ತಾರೊ ಅವರಿಗೆ ಮಾತ್ರ ವಿದ್ಯೆ ಒಲಿಯುತ್ತದೆ : ಎಂ.ಬಿ.ಗೊರವನಕೊಳ್ಳ

ಕುಂದಾಪುರ ವಲಯ ಕಥೊಲಿಕ್ ಸಭಾ ಸಮಿತಿ – ಶೆವೊಟ್ ಪ್ರತಿಷ್ಟಾನ್ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ