ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಮೂರು ನಗರಸಭೆ ಸೇರಿದಂತೆ ರಾಜ್ಯದ 61 ನಗರಸಭೆಗಳ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿಯನ್ನು ನಿಗಧಿಪಡಿಸಿ ಸರಕಾರ ಆದೇಶ ಹೊರಡಿಸಿದೆ. ಶ್ರೀನಿವಾಸಪುರ ಪುರಸಭೆ ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೂ ಹಾಗೂ ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳಾ ವರ್ಗಕ್ಕೆ ಮೀಸಲಾಗಿದೆ.
ಕೋಲಾರ ನಗರಸಭೆ ಅಧ್ಯಕ್ಷ ಸ್ಥಾನವು ಬಿಸಿಎಂ ಎ ವರ್ಗಕ್ಕೂ ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳಾ ವರ್ಗಕ್ಕೆ ಮೀಸಲಾಗಿದೆ.
ಮುಳಬಾಗಿಲು ನಗರಸಭೆ ಅಧ್ಯಕ್ಷ ಸ್ಥಾನವು ಬಿಸಿಎಂ ಎ ಮಹಿಳಾ ವರ್ಗಕ್ಕೂ ಹಾಗೂ ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟಜಾತಿ ಮಹಿಳಾ ವರ್ಗಕ್ಕೆ ಮೀಸಲಾಗಿದೆ.
ರಾಬರ್ಟ್ ಪೇಟೆ ಕೆಜಿಎಫ್ ನಗರಸಭೆ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಬಿಸಿಎಂ ಎ ವರ್ಗಕ್ಕೂ ಮೀಸಲಾಗಿದೆ.
ಬಂಗಾರಪೇಟೆ ಪುರಸಭೆ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ.
ಮಾಲೂರು ಪುರಸಭೆ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೂ ಹಾಗೂ ಉಪಾಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳಾ ವರ್ಗಕ್ಕೆ ಮೀಸಲಾಗಿದೆ.
ವೇಮಗಲ್ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೂ ಮೀಸಲಾಗಿದೆ.
ಸುಮಾರು ತಿಂಗಳುಗಳ ನಂತರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಪ್ರಕಟವಾಗಿದ್ದು, ಮೀಸಲಾತಿ ಪ್ರಕಟವಾಗುತ್ತಿದ್ದಂತೆಯೇ ಮೀಸಲಾತಿ ವರ್ಗಕ್ಕೆ ಬರುವ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟು ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.