ಕೆದಿಂಜೆ : 71ನೇ ಗಣರಾಜ್ಯೋತ್ಸವ ಸಮಾರಂಭ

ವರದಿ: ವಾಲ್ಟರ್ ಮೊಂತೇರೊ

 

 

ಕೆದಿಂಜೆ : 71ನೇ ಗಣರಾಜ್ಯೋತ್ಸವ ಸಮಾರಂಭ

 

 

ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಕೆದಿಂಜೆ ಹಳೆವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕೆದಿಂಜೆ ಶಾಲೆಯಲ್ಲಿ 71ನೇ ಗಣರಾಜ್ಯೋತ್ಸವ ಸಮಾರಂಭ ನಡೆಸಲಾಯಿತು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿ ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ 26ರಂದು ದೇಶದೆಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುವ ದಿನಾಚರಣೆ. ಜನವರಿ 26, 1950ರಂದು ಭಾರತೀಯ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಶಾಲಾ ಸಂಚಾಲಕರಾದ ಯು.ಶೇಷಗಿರಿ ಕಾಮತ್‍ರವರು ರಾಷ್ಟ್ರ ಧ್ವಜಾರೋಹಣಗೈದರು. ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯ ಸುರೇಶ್ ಕಾಮತ್, ಕೆದಿಂಜೆ ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಮೊದಲಾದವರಿದ್ದರು.
ಶಾಲಾ ಮುಖ್ಯ ಶಿಕ್ಷಕ ಪ್ರಥ್ವೀರಾಜ್ ಬಲ್ಲಾಳ್ ಸ್ವಾಗತಿಸಿದರು. ಸಹಶಿಕ್ಷಕಿ ರೇಖಾ ಪೈ ವಂದಿಸಿದರು. ಗೌರವ ಶಿಕ್ಷಕಿಯರಾದ ಮಮತಾ, ಚೇತನಾ ಭರತ್ ಉಪಸ್ಥಿತಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ದತ್ತಿನಿಧಿಯ ವಿದ್ಯಾರ್ಥಿವೇತನ ವಿತರಿಸಲಾಯಿತು.