ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡ್ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 105 ಸ್ತ್ರೀ ಶಕ್ತಿ ಸಂಘಗಳಿಗೆ ₹4.75 ಕೋಟಿ ಸಾಲ ವಿತರಿಸಿ ಮಾತನಾಡಿದರು.
ಮಹಿಳೆಯರ ಸಬಲೀಕರಣ ಇಂದಿನ ಅಗತ್ಯವಾಗಿದೆ. ಅವರನ್ನು ಖಾಸಗಿ ಬಡ್ಡಿ ವ್ಯಾಪಾರಿಗಳ ಶೋಷಣೆಯಿಂದ ಮುಕ್ತಪಡಿಸಬೇಕಾಗಿತ್ತು. ಆದ್ದರಿಂದಲೇ ಸತತ ಪ್ರಯತ್ನ ಮಾಡಿ ಬಡ್ಡಿ ರಹಿತ ಸಾಲ ನೀಡುವ ವ್ಯವಸ್ಥೆ ಜಾರಿಗೆ ತರಲಾಯಿತು. ಈಗ ಪ್ರತಿ ಸದಸ್ಯರಿಗೆ ₹50 ಸಾವಿರ ಮಾತ್ರ ಸಾಲವಾಗಿ ಸಿಗುತ್ತಿದೆ. ಇದರಿಂದ ಹೆಚ್ಚು ಪ್ರಯೋಜನವಾಗುತ್ತಿಲ್ಲ. ₹1 ಲಕ್ಷ ಸಾಲ ಕೊಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ಮುಖಂಡ ಮಧುಸೂದನರೆಡ್ಡಿ, ಅಯ್ಯಪ್ಪ, ಸೀತಾರಾಮರೆಡ್ಡಿ ಇದ್ದರು.