ವಿಧಾನ ಪರಿಷತ್ ಚುನಾವಣೆಯ ಅಂತಿಮ ಕಣದಲ್ಲಿ 4 ಜನ ಅಭ್ಯರ್ಥಿಗಳು ಡಾ || ಆರ್.ಸೆಲ್ವಮಣಿ

JANANUDI.COM NETWORK

ಕೋಲಾರ : ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ -18 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದೈವಾರ್ಷಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು ಯಾವುದೇ ಅಭ್ಯರ್ಥಿಯು ನಾಮಪತ್ರಗಳನ್ನು ಹಿಂಪಡೆದಿಲ್ಲ ಆದ್ದರಿಂದ ವಿಧಾನ ಪರಿಷತ್ ಚುನಾವಣೆ ಅಂತಿಮ ಕಣದಲ್ಲಿ 4 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ತಿಳಿಸಿದರು .

ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ 18 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದೈವಾರ್ಷಿಕ ಚುನಾವಣೆ ಹಾಗೂ ವಿಶ್ವ ಏಡ್ಸ್ ದಿನಾಚಾರಣೆ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಂ.ಎಲ್. ಅನಿಲ್ ಕುಮಾರ್ , ಜನತಾದಳ ( ಜಾತ್ಯತೀತ ) ಪಕ್ಷದ ಅಭ್ಯರ್ಥಿಯಾಗಿ ವಿ.ಇ.ರಾಮಚಂದ್ರ , ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಡಾ || ಕೆ.ಎನ್
ವೇಣುಗೋಪಾಲ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಎಂ.ಪಿ.ಅನಿಲ್ ಕುಮಾರ್ ಅವರು ಸ್ಪರ್ಧಿಸಿದ್ದರೆ ಎಂದು ಅವರು ತಿಳಿಸಿದರು . ಚುನಾವಣೆ ಮತದಾನ ಡಿಸೆಂಬರ್ 10 ರಂದು ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭವಾಗಿ ಸಂಜೆ 4.00 ಗಂಟೆಗೆ ಮುಕ್ತಾಯವಾಗುತ್ತದೆ . ಗ್ರಾಮ ಪಂಚಾಯಿತಿ , ಪುರಸಭೆ ಹಾಗೂ ನಗರಸಭೆ ಸದಸ್ಯರು ಮತದಾನರಾಗಿದ್ದು ಕೋಲಾರ ಜಿಲ್ಲೆಯಲ್ಲಿ 2925 ಮತದಾರರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2925 ಮತದಾರರು , 2675 ಪುರುಷರು ಹಾಗೂ 2925 ಮಹಿಳೆಯರು ಸೇರಿ ಒಟ್ಟು 5600 ಮತದಾರರಿದ್ದರೆ , ಒಟ್ಟು 321 ಮತಗಟ್ಟೆಗಳನ್ನು ಆಯೋಜಿಸಿದ್ದು , 73 ಅತಿ ಸೂಕ್ಷ್ಮ ಮತ್ತು 105 ಸೂಕ್ಷ್ಮ ಮತಕಟ್ಟೆಗಳನ್ನು ಗುರುತಿಸಿದ್ದು ಸೂಕ್ತ ಬಂದೊಬಸ್ತ್ ಮತ್ತು ರಕ್ಷಣೆಯನ್ನು ಒದಗಿಸಲು ಪೋಲಿಸ್ ಸಿಬ್ಬಂದಿ ಸಿದ್ದರಾಗಿದ್ದಾರೆ . ಚುನಾವಣೆಯ ಮತ ಎಣಿಕೆಯನ್ನು ಡಿಸೆಂಬರ್ 14 ರಂದು ಬೆಳಿಗ್ಗೆ 8.00 ಗಂಟೆಗೆ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗುವುದು we ale ಎಂದು ಅವರು ತಿಳಿಸಿದರು . ಡಿಸೆಂಬರ್ 01 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಶ್ರೀ ಟಿ.ಚನ್ನಯ್ಯ ರಂಗಮಂದಿರದಲ್ಲಿ ವಿಶ್ವ ಏಡ್ಸ್ ದಿನಾಚಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ . ಅಸಮಾನತೆಗಳನ್ನು ಕೊನೆಗೊಳಿಸಿ . ಏಡ್ಸ್‌ನ್ನು ಕೊನೆಗೊಳಿಸಿ . ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ ಈ ವರ್ಷದ ಘೋಷಣೆಯಾಗಿದೆ . ಸಮುದಾಯದಲ್ಲಿ ಏಡ್ಸ್ ಖಾಯಿಲೆಯನ್ನು ನಿರ್ಮೂಲನೆ ಮಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು . ಹೆಚ್.ಐ.ವಿ ಸೋಂಕು ಕೇವಲ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ , ತಪಾಸಣೆಗೊಳಿಸದ ರಕ್ತ ಮತ್ತು ರಕ್ತದ ಉಪ ಪದಾರ್ಥಗಳಿಂದ , ಸೋಂಕಿತ ತಾಯಿಯಿಂದ ಮಗುವಿಗೆ ಹಾಗೂ ಸೋಂಕಿತ ಸೂಜಿ , ಸಿರಿಂಜ್ ಮತ್ತು ಶಸ್ತ್ರಕ್ರಿಯಾ ಸಾಧನಗಳಿಂದ ಮಾತ್ರ ಹರಡುತ್ತದೆ ಎಂದು ಅವರು ತಿಳಿಸಿದರು . ಈ ಸಂದರ್ಭದಲ್ಲಿ ಚುನಾವಣೆ ತಶಿಲ್ದಾರ್ ನಾಗವೇಣಿ , ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ || ಕಮಲ ಅವರು ಉಪಸ್ಥಿತರಿದ್ದರು .