ಸಚಿವ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ – ಎಲ್ಲಡೆ ಈಶ್ವರಪ್ಪನ ಬಂಧನಕ್ಕೆ ಆಗ್ರಹ 

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಇಂದು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಅವರು ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಕೂಡ  ಬರೆದಿದ್ದರು.    ಅದಕ್ಕೆ  ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಈಶ್ವರಪ್ಪ ಎಚ್ಚರಿಕೆ ನೀಡಿದ್ದರು. ಈ ಮಧ್ಯೆ ಸಂತೋಷ್ ಪಾಟೀಲ್ ಕುಟುಂಬ ನಾಪತ್ತೆಯಾಗಿತ್ತು. ಸೋಮವಾರ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಸಂತೋಷ್ ಪಾಟೀಲ್ ಅವರ ಮೊಬೈಲ್ ಫೋನ್ ರಿಂಗ್ ಆಗುತ್ತಿದ್ದರೂ ರಿಸೀವ್ ಮಾಡುತ್ತಿರಲಿಲ್ಲ.

ಮೊಬೈಲ್ ಲೊಕೇಶನ್ ಉಡುಪಿಯನ್ನು ತೋರಿಸುತ್ತಿತ್ತು. ಇದೇ ಜಾಡು ಹಿಡಿದು ಪೊಲೀಸರು ತನಿಖೆ ಆರಂಭಿಸಿದಾಗ  ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ. ಅವರಿಗೆ ಶಿಕ್ಷೆಯಾಗಬೇಕು. ತನ್ನ ಹೆಂಡತಿ- ಮಕ್ಕಳಿಗೆ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಯಡಿಯೂರಪ್ಪ ಅವರು ವ್ಯವಸ್ಥೆ ಮಾಡಿಕೊಡಬೇಕಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.


ಸಂತೋಷ್ ಪತ್ನಿ ಜಯಶ್ರೀ ಆರೋಪ

ಬಿಜೆಪಿಯೇ ನನ್ನ ಗಂಡನನ್ನು ಸಮಾಧಿ ಮಾಡಿಬಿಟ್ಟಿದೆ. ಈಶ್ವರಪ್ಪ ನನ್ನ ಪತಿಯ ಸಾವಿಗೆ ನೇರ ಕಾರಣ. ಲಂಚಕ್ಕಾಗಿ ನನ್ನ ಪತಿಯನ್ನು ಈಗ ಮುಗಿಸಿಬಿಟ್ಟಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪತ್ನಿ ಜಯಶ್ರೀ ಆರೋಪಿಸಿದ್ದಾರೆ‌. 

 ಸಚಿವ ಈಶ್ವರಪ್ಪ ಸ್ಥಾನಕ್ಕೆ ರಾಜೀನಾಮೆ ನೀಡೋವರೆಗೆ, ಸಂತೋಷ್ ಮೃತ ದೇಹವನ್ನು ಎತ್ತಲ್ಲ – ತಮ್ಮ  ಪ್ರಶಾಂತ್ ಪಾಟೀಲ್ ಸಹೋದರ

ಸಂತೋಷ್ ನ ಸಾವಿಗೆ ನೇರವಾಗಿ ಸಚಿವ ಕೆಎಸ್ ಈಶ್ವರಪ್ಪನೇ ಕಾರಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನನ್ನ ಸಹೋದರನ ಮೃತದೇಹ ಎತ್ತಲ್ಲ ಎಂದು ಸಹೋದರ ಪ್ರಶಾಂತ್ ಪಾಟೀಲ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಕಣ್ಣೀರಿಡುತ್ತಲೇ ಮಾತನಾಡಿದ ಅವರು, ‘ಶೇ.40ರಷ್ಟು ಗುತ್ತಿಗೆ ಹಣದಲ್ಲಿ ಕಮೀಷನ್ ಆರೋಪವನ್ನು ನನ್ನ ತಮ್ಮ ಮಾಡಿದ್ದ ನಂತರ, ಆತನ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಕೇಸ್ ಹಾಕಿದ್ದರು. ‘ನನ್ನ ತಮ್ಮ ಸಂತೋಷ್ ನಿಯತ್ತಿನ ಮನುಷ್ಯನಾಗಿದ್ದಾನೆ. ಅಂತವನ ವಿರುದ್ಧವೇ ಸುಳ್ಳು ಕೇಸ್ ಹಾಕಿಸಿದ್ದರು. ನನ್ನ ತಮ್ಮನ ಸಾವಿಗೆ ಈಶ್ವರಪ್ಪನೇ ಕಾರಣ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋವರೆಗೆ, ಸಂತೋಷ್ ಮೃತ ದೇಹವನ್ನು ಎತ್ತಲ್ಲ’ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಆಕ್ರೋಶ

ಸಿಎಂ ಇದ್ದ ಹೋಟೆಲ್ ಗೆ ಮುತ್ತಿಗೆ ಯತ್ನ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೇಲೆ ಆರೋಪ ಕೇಳಿ ಬಂದ ಹಿನ್ನೆಲೆ, ಅವರನ್ನು ಬಂಧಿಸಲು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು