

ಕುಂದಾಪುರ: ನವೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆಯ 50ನೇ ವರ್ಷಾಚರಣೆಯ ಅಂಗವಾಗಿ ನಡೆದ ” ಬಂಗಾರದ ಹೆಜ್ಜೆ” ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಮಟ್ಟದ ಬಡಗುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜು 25000 ರೂಪಾಯಿಗಳು ಮತ್ತು ಪ್ರಶಸ್ತಿ ಯೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ಉಡುಪಿಯ ಮಹಾತ್ಮ ಗಾಂಧಿ ಕಾಲೇಜು 15000 ರೂಪಾಯಿಗಳೊಂದಿಗೆ ಪ್ರಶಸ್ತಿ ಫಲಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಂಕರನಾರಾಯಣ ಇವರು 10000 ರೂಪಾಯಿಗಳು ಪ್ರಶಸ್ತಿ ಫಲಕದೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ವೈಯಕ್ತಿಕ ಪ್ರಶಸ್ತಿಗಳಲ್ಲಿ ರಾಜ ವೇಷವನ್ನು ಎಸ್.ಎಮ್.ಎಸ್. ಕಾಲೇಜು ಬ್ರಹ್ಮಾವರ, ಪುಂಡು ವೇಷವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ, ಸ್ತ್ರೀ ವೇಷಕ್ಕೆ ಮಹಾತ್ಮ ಗಾಂಧಿ ಕಾಲೇಜು ಉಡುಪಿ, ಬಣ್ಣದ ವೇಷಕ್ಕೆ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಹಾಸ್ಯವೇಷಕ್ಕೆ ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು, ಉಡುಪಿ ಪಡೆದುಕೊಂಡಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ ಶಾಂತಾರಾಮ್ ಪ್ರಭು ವಹಿಸಿದ್ದರು.
ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ, ವಿಶ್ವಸ್ಥ ಮಂಡಳಿಯ ಸದಸ್ಯರಾದ ಉದ್ಯಮಿ ನೇರಂಬಳ್ಳಿ ರಾಘವೇಂದ್ರ ರಾವ್,
ಸೌಕೂರು ದೇವಸ್ಥಾನದ ಮೊಕ್ತೇಸರರಾದ ಕಿಶನ್ ಹೆಗ್ಡೆ ಪಳ್ಳಿ,
ತೀರ್ಪುಗಾರಾದ ಮಂಜುನಾಥ ಕೆ.ಜಿ, ಉದಯ ಕುಮಾರ್ ಶೆಟ್ಟಿ, ನಂದೀಶ್ ಶೆಟ್ಟಿ ಬಿಲ್ಲಾಡಿ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ಉಪಸ್ಥಿತರಿದ್ದರು.


