ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯ ರದ್ದು!ಸರಣಿ ಭಾರತಕ್ಕೆ!!

JANANUDI.COM NETWORK


ಹೊಸದಿಲ್ಲಿ: ಭಾರತ ಹಾಗೂ ಇಂಗ್ಲೆಂಡ್ ನಡುವೆ ಮ್ಯಾಂಚೆಸ್ಟರ್ನ ದಿ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಶುಕ್ರವಾರದಿಂದ ಪ್ರಾರಂಭವಾಗಬೇಕಿದ್ದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ ಇದನ್ನು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಅಕಾಡೆಮಿ ಸ್ಪಷ್ಟಪಡಿಸಿದೆ.
ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಕೊನೆಯ ಪಂದ್ಯವನ್ನು ರದ್ದುಗೊಳಿಸಲಾಗಿದೆ ಎಂದು ಇಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಭಾರತ ತಂಡದ ಸಹಾಯಕ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಇದರಿಂದ ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಇನ್ನಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದ್ದು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಹಾಗೂ ಇಸಿಬಿ ಮಾತುಕತೆ ನಡೆಸಿ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ತಿಳಿಸಿದೆ. ಪಂದ್ಯವನ್ನುರದ್ದಾಗಿದಕ್ಕೆ ಅಭಿಮಾನಿಗಳ ಬಳಿ ಕ್ಷಮೆಯಾಚಿಸುತ್ತೇವೆಂದು ಇಸಿಬಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಮೂಲಕ 5 ಟೆಸ್ಟ್ ಗಳ ಭಾರತ್ -ಇಂಗ್ಲೆಡ್ ಟೆಸ್ಟ್ ಸರಣಿ ಮುಕ್ತಾಯಗೊಂಡಿದ್ದು 1 ಟೆಸ್ಟ್ ಡ್ರಾ ಗೊಂಡಿದ್ದು, 2 -1 ರ ಮೂಲಕ ಸರಣಿ ಭಾರತದ ಪಾಲಿಗಾಗಿದೆ.