ಶಿರ್ವ: ಇಂದು ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಹಾಗೂ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಕಾಲೇಜಿನಲ್ಲಿ ವಿವಿಧ ಘಟಕಗಳು ಲಭ್ಯವಿರುವುದು ಎಲ್ಲರಿಗೂ ತಿಳಿದಿದೆ. ಆದರೆ ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್.ಸಿ.ಸಿ) ಪ್ರಥಮ ವಾಗಿರುತ್ತದೆ. ಇದಕ್ಕೆ ಕಾರಣವೆಂದರೆ ಇಲ್ಲಿಯ ವಿದ್ಯಾರ್ಥಿಗಳಿಗೆ ಎಲ್ಲಾ ಚಟುವಟಿಕೆಗಳಲ್ಲಿಯೂ ದೇಶ ಕಾಯುವ ಯೋಧರಿಂದ ತರಬೇತಿಗಳನ್ನು ನೀಡಿ ಅವರಲ್ಲಿ ಈ ಭಾವನೆಗಳನ್ನು ಕಾರ್ಯರೂಪಗೊಳಿಸುವರಲ್ಲಿ ನಮ್ಮ ರಾಷ್ಟ್ರದ ಸೇನೆಯ ಅಪಾರ ಕೊಡುಗೆ ಎನ್ ಸಿ ಸಿ ಕ್ಯಾಡೆಟ್ ಗಳಿಗಿವೆ. ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ 73ನೇ ಸಂವಿಧಾನ ಹಾಗೂ 74ನೇ ಎನ್‌ಸಿಸಿ ದಿನಾಚರಣೆಯನ್ನು ಪ್ರಯುಕ್ತ ಪ್ರಕೃತಿಯ ರಕ್ಷಣೆ ಮತ್ತು ಪೋಷಣೆಯ ಅನ್ವಯ ಕ್ಯಾಡೆಟ್ ಗಳಿಂದ ವನಮೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.ಸಂವಿಧಾನ ಪ್ರತಿಜ್ಞಾವಿಧಾನವನ್ನು ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ರವರು ನೆರವೇರಿಸಿ,ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.
ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಇಂದು, ತಮ್ಮ ಪ್ರಾಣದ ಪರಮ ತ್ಯಾಗ ಮಾಡಿದ ವೀರಯೋಧರೀಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ದಿನವನ್ನು ಪ್ರತಿವರ್ಷ ನವೆಂಬರ್ ನಾಲ್ಕನೇ ಭಾನುವಾರರಂದು ಗುರುತಿಸಲಾಯಿತು.ಇಂದು ಬಹಳಷ್ಟು ಪ್ರಮುಖರು ಎನ್.ಸಿ.ಸಿಯ ಹಳೆ ವಿದ್ಯಾರ್ಥಿಗಳು ಆಗಿರುವುದು ಗಮನಾರ್ಹ. ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನವನ್ನು ಮಾಡಿ, ಅವರನ್ನು ಸ್ಮರಿಸುತ, ನಮ್ಮ ಸಂವಿಧಾನ ಪ್ರಪಂಚದಲ್ಲಿ ಉತ್ತಮವಾದ ಸಂವಿಧಾನ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ, ಎಲ್ಲರಿಗೂ ಶುಭಹಾರೈಸಿದರು.
ಕ್ಯಾಡೆಟ್ ಸೋನಾಲಿ ಕುಲಾಲ್ ಎನ್‌ಸಿಸಿ ದಿನದ ಮುಖ್ಯ ಉದ್ದೇಶವನ್ನು ಮತ್ತು ಮಹತ್ವವನ್ನು ವಿವರಿಸಿ, ಕ್ಯಾಡೆಟ್ ಉಳಿದ್ರಾ ಖುಷಿ ಸಂವಿಧಾನ ದಿನದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದರು
ಇದೇ ಸಂದರ್ಭದಲ್ಲಿ ವಿವಿಧ ತರಬೇತಿಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಕ್ಯಾಡೆಟ್ ಗಳಾದ ಲಾಯ್ ವಿನ್ಸ್ಟನ್ ಫರ್ನಾಂಡಿಸ್, ಸ್ಮಿತಾ, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ, ವಿಜೇತ ಇವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.
ಎನ್.ಸಿ.ಸಿ ಜೂನಿಯರ್ ಅಂಡರ್ ಆಫೀಸರ್ ಧೀರಜ್ ಆಚಾರ್ಯ, ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಸರ್ಜೆಂಟ್ ದೀಪಕ್, ರಿಯಾನ್ ಡಿಸೋಜಾ, ಕಾರ್ಪೋರಲ್ ಮಂಜುನಾಥ ಅಮರಾವತಿ,ಲ್ಯಾನ್ಸ್ ಕಾರ್ಪೋರಲ್ ಅನೀಶ್ ಭಟ್, ಶೆಟ್ಟಿಗಾರ ಹೇಮಶ್ರೀ ಸುದರ್ಶನ್ , ಕ್ಯಾಡೆಟ್ ಅನುಪ್ ನಾಯಕ್ ಮತ್ತು ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದ್ದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಎನ್.ಸಿ.ಸಿ ಅಧಿಕಾರಿ ಜಾನ್ ವಿಲಿಯಂ ವೇಗಾಸ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ, ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು. ಸೀನಿಯರ್ ಅಂಡರ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್ ಸ್ವಾಗತಿಸಿ, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ ವಂದಿಸಿದರು. ಸುಶ್ಮಿತಾ ಎಸ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.