ಕುಂದಾಪುರ (ಜ.26): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ. ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಇಂದು ಭಾರತದ 76ನೇ ಗಣರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಸಂಸ್ಥೆಯ ಅಕಾಡೆಮಿಕ್ ಕೋ ಆರ್ಡಿನೇಟರ್ ಆಗಿರುವ ಶ್ರೀಮತಿ ವಿಲ್ಮಾ ಡಿ.ಸಿಲ್ವ, ಮಹಾತ್ಮಾ ಗಾಂಧೀಜಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೆ ಗೈದು, ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಶುಭ ಸಂದೇಶವನ್ನು ತಿಳಿಸಿದರು. ಶಿಕ್ಷಕಿ ಆಶಾ ಎಸ್ ಗಣರಾಜ್ಯೋತ್ಸವದ ಮಹತ್ವ ಮತ್ತು ಆ ನಿಟ್ಟಿನಲ್ಲಿ ಭಾರತೀಯರಾಗಿ, ಶಿಕ್ಷಕರಾಗಿ ತಮ್ಮ ಜವಾಬ್ದಾರಿಗಳನ್ನು ನೆನಪಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು, ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕಿ ಸರೋಜಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.