

ಒಡಿಶಾ: ನಿಂತಿದ್ದ ಟ್ರಕಿಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 7 ಜನರು ಗಂಭೀರ ಗಾಯಗೊಂಡಿರುವ ಭೀಕರ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯ NH-20 ಯಲ್ಲಿ ಸಂಭವಿಸಿದೆ ಇಂದು ಡಿ.1ರಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಗಂಜಾಂನ ದಿಗಪಹಂಡಿ ನಿವಾಸಿಗಳು ಎಂದು ತಿಳಿದುಬಂದಿದೆ.
ಗಂಜಾಂ ಜಜಿಲ್ಲೆಯಿಂದ ಕಿಯೋಂಜಾರ್ ಜಿಲ್ಲೆಯ ಘಾಟ್ಗಾಂವ್ ಪ್ರದೇಶದ ಮಾ ತಾರಿಣಿ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಾನ್ನಲ್ಲಿ 20 ಜನರಿದ್ದು, ರಸ್ತೆ ಬದಿ ನಿಂತಿದ್ದ ಟ್ರಕ್ಗೆ ವ್ಯಾನ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಲಿಜೋಡಿ ಪೊಲೀಸರು ಸ್ಥಳಕ್ಕೆ ದಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.