ಕೋಲಾರ,ಮೇ.18: ತಾಲೂಕಿನ ಶಿಳ್ಳಂಗೆರೆ ಗ್ರಾಮದಲ್ಲಿ ಚರಂಡಿಗಳು ಮತ್ತು ಕಸಕಡ್ಡಿಗಳನ್ನು ಸ್ವಚ್ಛ ಮಾಡುವಂತೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ನಿವಾಸಿ ಹಾಗೂ ದಲಿತ ಮುಖಂಡ ಅರುಣ್ ಕುಮಾರ್, ಪದಾಧಿಕಾರಿಗಳಾದ ಮುರಳಿ, ಪ್ರತಾಪ್, ವೇಣು, ಹರೀಶ್ ಜಿ ಆರೋಪಿಸಿದ್ದಾರೆ.
ಗ್ರಾಮದಲ್ಲಿ ಎಲ್ಲಂದರಲ್ಲಿ ಕಸಕಡ್ಡಿಗಳು ಬಿದ್ದಿವೆ. ಚರಂಡಿಗಳು ಕಸಕಡ್ಡಿಗಳಿಂದ ತುಂಬಿರುವ ಕಾರಣ ಮಳೆ ಬಂದಾಗ ನೀರು ಸರಾಗವಾಗಿ ಹರಿಯದೆ ಮನೆಗಳಿಗೆ ನುಗ್ಗಿತ್ತಿವೆ. ಚರಂಡಿಗಳಲ್ಲಿ ನಿಂತಿರುವ ನೀರು ಗೊಬ್ಬು ನಾರುತ್ತಾ ದುರ್ವಾಸನೆ ಬಿರುತ್ತಿವೆ. ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಮಕ್ಕಳು ಹಾಗೂ ಸಾರ್ವಜನಿಕರು ವಿವಿಧ ಖಾಯಿಲೆಗೆ ತುತ್ತಾಗುವ ಸಂಭವವಿದೆ ಎಂದು ದೂರಿದರು.
ಈಗಾಗಲೇ ಚರಂಡಿಗಳನ್ನು ಸ್ವಚ್ಛಗೊಳಿಸಬೇಕೆಂದು ಗ್ರಾಮ ಪಂಚಾಯತಿ ಸದಸ್ಯರಿಗೆ ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಹ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ. ಕೂಡಲೇ ಗ್ರಾಮದಲ್ಲಿನ ಕಸಕಡ್ಡಿ ಮತ್ತು ಚರಂಡಿಗಳ ಸ್ವಚ್ಚತೆಗೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪಂಚಾಯಿತಿಯ ಮುಂದೆ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.