ಶ್ರೀನಿವಾಸಪುರ : ವಿಶ್ವ ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಟ ಪದ್ಧತಿಯಾಗಿದ್ದು ನಿರ್ಮೂಲನೆಗೆ ಶಿಕ್ಷಕರು ಹಾಗು ಶಿಕ್ಷಣ ಇಲಾಖಾಧಿಕಾರಿಗಳು ಜಾಗೃತಿ ಮೂಲಕ ಶ್ರಮಿಸಬೇಕು ಜೆಎಂಎಫ್ಸಿಯ ಅಪರ ಸಿವಿಲ್ ನ್ಯಾಯಾದೀಶ ಹೆಚ್ .ಆರ್.ಸಚಿನ್ ಎಂದು ಹೇಳಿದರು.
ಪಟ್ಟಣದ ತ್ಯಾಗರಾಜ ಬಡವಾಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ವಿಶ್ವಬಾಲಕಾರ್ಮಿಕರ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.
ಬಾಲ್ಯದಲ್ಲಿ ಆಟವಾಡುತ್ತಾ, ತನ್ನ ಜೊತೆಗಾರರೊಂದಿಗೆ ಶಾಲೆಗೆ ಹೋಗಿ ಕಲಿಯಬೇಕಾದ ಮಕ್ಕಳು ಹಲವಾರು ಕಾರಣಗಳಿಂದ ಹಾಗೂ ಸಮಸ್ಯಗಳಿಂದ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಇದು ಒಂದು ಸಾಮಾಜಿಕ ಪಿಡುಗು .ಕಟ್ಟಡಗಳ ಕೆಲಸಗಳಲ್ಲಿ , ಅಂಗಡಿ ಮಳಿಗೆಗಳಲ್ಲಿ, ಗಾರ್ಮೆಂಟ್ಸ್ಗಳಲ್ಲಿ , ಹೋಟೆಲ್ಗಳಲ್ಲಿ ವಾಣಿಜ್ಯ ಸಂಸ್ಥೆಗಳಲ್ಲಿ, ದೊಡ್ಡ ಮನೆಗಳಲ್ಲಿ , ಅಂಗಡಿ ಮುಗ್ಗಟ್ಟುಗಳಲ್ಲಿ 18 ಕ್ಕಿಂತ ಕಡಿಮೆ ವಯೋಮಾನದವರು ದುಡಿಮೆಯಲ್ಲಿ ತೊಡಗಿರುತ್ತಾರೆ. ಅವರ ದೈಹಿಕ ಹಾಗೂ ಮಾನಸಿಕ ಸಾಮಾಥ್ರ್ಯಕ್ಕೆ ಕಷ್ಟವಾಗುವಂಥ ಕೆಲಸಗಳನ್ನು ಮಾಡುತ್ತಿದ್ದಾರೆ.ಇದರಿಂದ ಶಿಕ್ಷಣ ವಂಚಿತರಾಗುತ್ತಿದ್ದಾರೆ.ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮೆ ತಮ್ಮ ಜೀವನನ್ನೇ ಕಳೆದುಕೊಳ್ಳುತ್ತಿದ್ದಾರೆ ಹಾಗಾಗಿ ಬಾಲಕಾರ್ಮಿಕರನ್ನ ರಕ್ಷಣೆ ಮಾಡಬೇಕು ಎಂದು ಸೂಚಿಸಿದರು.
ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರೀಕರಾರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಕೀಲರ ಸಂಘದ ತಾಲೂಕು ಅಧ್ಯಕ್ಷ ಎಸ್.ವಿ.ಜಯರಾಮೇಗೌಡ, ವಕೀಲ ಶ್ರೀನಿವಾಸಗೌಡ, ಇಸಿಒ ಹನುಮೇಗೌಡ, ಮುಖ್ಯ ಶಿಕ್ಷಕ ಎಂ.ಬೈರೇಗೌಡ, ಶಿಕ್ಷಕಿ ನೀಲಾವತಿ ನಿರೂಪಿಸಿದರು, ಗೀತಾಂಜಲಿ ಪ್ರಮಾಣ ವಚನ ಬೋಧಿಸಿದರು. ಶಿಕ್ಷಕರಾದ ವಿಜಯಮ್ಮ, ಶಶಿಕಲಾ, ಗೌರಮ್ಮ, ರೆಡ್ಡಮ್ಮ, ಶ್ರೀದೇವಿ, ದಿವ್ಯ, ಅರ್ಚನಾ, ನಾಗರಾಜ್, ನಾರಾಯಣಸ್ವಾಮಿ ಇದ್ದರು.