ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡಲು ಅವಕಾಶ ನೀಡಬಾರದು ಎಂದು ಜಿಲ್ಲಾ ಲೋಕಾಯುಕ್ತ ವರಿಷ್ಠಾಧಿಕಾರಿ ಡಿ.ಕೆ.ಉಮೇಶ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಲೋಕಾಯುಕ್ತ ಕಚೇರಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಅಹವಾಲು ಸ್ವೀಕಾರ ಸಭೆಯಲ್ಲಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿಗಳು ಅರ್ಜಿ ಸ್ವೀಕರಿಸಿದ 30 ದಿನಗಳ ಒಳಗೆ ಸಮಸ್ಯೆ ಬಹೆಹರಿಸಬೇಕು. ಸಾಧ್ಯವಿಲ್ಲವಾದರೆ ಅದಕ್ಕೆ ಪೂರಕವಾಗಿ ಹಿಂಬರಹ ನೀಡಬೇಕು ಎಂದು ಹೇಳಿದರು.
ಅಧಿಕಾರಿಗಳು ತಮ್ಮ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಮಾನವೀಯತೆಯಿಂದ ನಡೆದುಕೊಳ್ಳಬೇಕು. ಅವರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಪರಿಹಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಕಂದಾಯ, ತಾಲ್ಲೂಕು ಪಂಚಾಯಿತಿ ಮತ್ತಿತರ ಇಲಾಖೆಗಳಿಗೆ ಸಂಬAಧಿಸಿದAತೆ 52 ಅರ್ಜಿಗಳನ್ನು ಸ್ವೀಕರಿಸಲಾಯಿತು.
ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಸೂರ್ಯನಾರಾಯಣ, ಇನ್ಸ್ಪೆಕ್ಟರ್ ರೇಣುಕಾ, ಸಿಬ್ಬಂದಿ ಎಂ.ಎನ್.ಶ್ರೀನಾಥ್, ದೇವಪ್ಪ, ನಾಗವೇಣಿ, ಶಿವಪ್ಪ, ಮಾನಸ ಇದ್ದರು,