ಕುಂದಾಪುರ : ಕುಂದಾಪುರ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ “ಸ್ವಾತಂತ್ರ್ಯ ದೊರಕಿದ ಕಾಲದ ನಾಯಕರ ಹೋರಾಟವನ್ನು ಪ್ರಾದೇಶಿಕ ನೆಲೆಯಲ್ಲಿ ನೆನಪಿಸಿ ಗೌರವಿಸುವ ಊರಿನ ಹಲವು ರಸ್ತೆಗಳ ಹೆಸರಿನ ಔಚಿತ್ಯವನ್ನು ಇಂದಿನ ಮಕ್ಕಳಿಗೆ ವಿವರಿಸುವ ಕೆಲಸ ಶಿಕ್ಷಕರು ಮಾಡಬೇಕು. ಅಂಥ ಧೀಮಂತ ನಾಯಕರು ಪ್ರತಿಪಾದಿಸಿದ ಒಗ್ಗಟ್ಟು ಮತ್ತು ಸಮಗ್ರತೆಯ ಮೌಲ್ಯಗಳನ್ನು ನಾವೆಲ್ಲರೂ ಪಾಲಿಸಬೇಕು. ಬಿಕ್ಕಟ್ಟು ಎದುರಿಸುತ್ತಿರುವ ನೆರೆಯ ರಾಷ್ಟ್ರಗಳ ಸಂಘರ್ಷಗಳ ಅರಿವು ನಮಗಿದ್ದು, ನಮ್ಮ ದೇಶವನ್ನು ಸಾಮರಸ್ಯದ ಸೂತ್ರದಿಂದ ಒಗ್ಗೂಡಿಸಬೇಕು ” ಎಂದು ಕುಂದಾಪುರದ ಆರ್.ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಕರೆ ನೀಡಿದರು. ಈ ಸಂದರ್ಭದಲ್ಲಿ ಗಾಂಧೀಜಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪುಷ್ಪಾಂಜಲಿ ಸಲ್ಲಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪ್ರೀತೇಶ್ ಶೆಟ್ಟಿಯವರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಾಮ್ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಶ್ರೀ ಸಂದೀಪ್ ಪೂಜಾರಿಯವರು ಧ್ವಜಾರೋಹಣ ಕಾರ್ಯಕ್ರಮವನ್ನು ನಿರ್ದೇಶಿಸಿದರು. ಕಾಲೇಜಿನ
ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿ. ಬಿ. ಯವರು ಕಾರ್ಯಕ್ರಮ ನಿರ್ವಹಿಸಿದರು.