ಕುಂದಾಪುರ. ಸೆ.7: ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಶಿಕ್ಷಕ ದಂಪತಿಗಳಿಗೆ ಸನ್ಮಾನಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕ ದಂಪತಿಗಳಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ದಿನಕರ್ ಆರ್ ಶೆಟ್ಟಿ ಮತ್ತು ಅವರ ಪತ್ನಿ ನಿವೃತ್ತ ಶಿಕ್ಷಕಿ ಶ್ರೀಮತಿ ಸವಿತಾ ಶೆಟ್ಟಿ ಅವರನ್ನು ಬಸ್ರೂರಿನ ಅವರ ಸ್ವಗ್ರಹದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾದ ಡಾ.ಅಂಪಾರು ಸಿತ್ಯಾನಂದ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಶ್ರೀ ನೀತಿಶ್ ಶೆಟ್ಟಿ ಬಸ್ರೂರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀಧರ ಶೆಟ್ಟಿ ಹುಯ್ಯಾರು, ಖಜಾಂಜಿ ಭರತರಾಜ್ ಶೆಟ್ಟಿ ಚಾಂಬೂರು , ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುಕುಮಾರ್ ಶೆಟ್ಟಿ ಹೇರಿಕುದ್ರು ಉಪಸ್ಥಿತರಿದ್ದರು.
ಡಾ. ಚೇತನ್ ಶೆಚ್ಚಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಅಕ್ಷಯ್ ಹೆಗ್ಗೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು