ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ, ತಾಲ್ಲೂಕು ಗ್ರಾಮ ಪಂಚಾಯಿತಿ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕೆಲವು ಬೇಡಿಕೆ ಈಡೇರಿಕೆಗೆ ಸರ್ಕಾರ ಅನುಮೋದನೆ ನೀಡಿದ್ದರೂ, ಸಂಬAಧಪಟ್ಟ ಅಧಿಕಾರಿಗಳು ಜಾರಿ ಮಾಡಲು ಮುಂದಾಗುತ್ತಿಲ್ಲ. ಪದೇ ಪದೇ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅರ್ಹ ಸಿಬ್ಬಂದಿಯನ್ನೂ ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸುವುದು ಸೇರಿದಂತೆ ಒಟ್ಟು ೩೦ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಸರ್ಕಾರದ ನಿರ್ಲಕ್ಷö್ಯದ ಫಲವಾಗಿ ನೌಕರರ ಕುಟುಂಬಗಳು ಬೀದಿಗೆ ಬೀಳುವುದನ್ನು ತಪ್ಪಿಸಬೇಕು. ಇಲ್ಲವಾದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ನೌಕರರ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿ ಅವರಿಗೆ ನೀಡಿದರು.
ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಅಮರನಾರಾಯಣಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಶಿವಶಂಕರ್, ಸಂಘಟನಾ ಕಾರ್ಯದರ್ಶಿ ಟಿ.ಎನ್.ಆಂಜಿನಪ್ಪ, ಮುಖಂಡರಾದ ಕ್ರಿಷ್ಟಪ್ಪ, ಅಶೋಕ್, ಟಿ.ಎಚ್.ಆಂಜಿನಪ್ಪ, ವೆಂಕಟರವಣಪ್ಪ ಇದ್ದರು.