ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.
ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು. ನಿನ್ನೆ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಶುರುವಾಗಿದೆ.
ಈ ಕೂಂಬಿಂಗ್ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಇದ್ದ. ಪೊಲೀಸರ ಗುಂಡಿನ ದಾಳಿಗೆ ಈತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ನಡೆಸಲಾಗುತ್ತಿದೆ.ನಾಲ್ವರು ಕಾಡಿನ ಹಾದಿಯಲ್ಲಿ ಪರಾರಿಯಾಗಿದ್ದಾರೆ. ಎಎನ್ ಎಫ್ ಕೂಂಬಿಂಗ್ ಮುಂದುವರಿಸಿದ್ದು, ಇನ್ನುಳಿದವರಿಗಾಗಿ ಶೋಧ ನಡೆಸುತ್ತಿದೆ.