ಶ್ರೀನಿವಾಸಪುರ : ಸರ್ಕಾರದ ಸೌಲಭ್ಯಗಳನ್ನು ಹಾಗು ದಾನಿಗಳು ನೀಡುವಂತಹ ಲೇಖನಿ ಸಾಮಾಗ್ರಿಗಳನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾವಂತರಾಗುವಂತೆ ಎಂದು ದಾನಿ ಆವಲಕುಪ್ಪ ಎಂ. ರಂಗಪ್ಪ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತಾಲೂಕಿನ ಆವಲಕುಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ದಾನಿಗಳಾದ ಎಂ. ರಂಗಪ್ಪ ಕುಟುಂಬದವರಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು , ಬ್ಯಾಗ್, ಲೇಖನಿ , ಆಟದ ಸಾಮಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು.
ಹಿಂದೆ ಬಡತನದ ಕಾರಣಕ್ಕಾಗಿ ಅನೇಕ ಮಕ್ಕಳು ಶಾಲೆಯನ್ನು ತೊರೆಯುತ್ತಿದ್ದರು ದೂರದ ಊರುಗಳಿಗೆ ಹೋಗಿ ಶಿಕ್ಷಣವನ್ನು ಪಡೆಯಲು ಹಿಂಜರಿಯುತ್ತಿದ್ದರು. ಇದನ್ನು ಅರಿತ ಸರ್ಕಾರ ಪ್ರತಿ ಹಳ್ಳಿಯಲ್ಲಿಯೂ ಪ್ರಾಥಮಿಕ ಶಾಲೆಗಳನ್ನು ತೆರೆದು ಓದಲು ಅನುವು ಮಾಡಿಕೊಟ್ಟಿದೆ. ಜೊತೆಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ.
ಮುಖ್ಯ ಶಿಕ್ಷಕ ಎಂ.ಶಂಕರಪ್ಪ ಮಾತನಾಡಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಉಳಿಯಬೇಕಾದರೆ ಹಣವಂತರು ಬಡಮಕ್ಕಳನ್ನು ಶೈಕ್ಷಣಿಕ ಪ್ರಗತಿಯನ್ನು ಹೊಂದಲು ತಮ್ಮಿಂದಾಗುವ ಆರ್ಥಿಕ ಸಹಾಯ ಹಾಗು ಶಿಕ್ಷಣಕ್ಕೆ ಬೇಕಾದ ಸಾಮಾಗ್ರಿಗಳನ್ನು ಕೊಡುಗೆಯನ್ನು ನೀಡುವುದರ ಮೂಲಕ ಪ್ರೋತ್ಸಾಹಿಸಬೇಕು.
12 ವಿದ್ಯಾರ್ಥಿಗಳಿಗೆ ಉಚಿತವಾಗಿ ಉಚಿತವಾಗಿ ನೋಟ್ ಪುಸ್ತಕಗಳನ್ನು , ಬ್ಯಾಗ್, ಲೇಖನಿ , ಆಟದ ಸಾಮಗ್ರಿಗಳ ಕಿಟ್ ವಿತರಿಸಿದರು. ಕುಟುಂಬದವರಾದ ಅನುಪಮ, ಶಾಂತರಾಮ್, ಎಸ್ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ಶಿಕ್ಷಕಿ ಪಾರ್ವತಮ್ಮ, ರಮೇಶ್, ನಿವೃತ್ತ ಮುಖ್ಯಶಿಕ್ಷಕ ಬೈರೆಡ್ಡಿ, ಮುಖಂಡರಾದ ಜಯರಾಮರೆಡ್ಡಿ, ವೆಂಕಟರೆಡ್ಡಿ , ರಮೇಶ್, ಚಂದ್ರಶೇಖರ ರೆಡ್ಡಿ ಇದ್ದರು.