ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಡಿಸೆಂಬರ್ 14 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತದಿಂದ ಒಂದೆರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಡಿ.14 ಹಾಗೂ 15 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.