ಕುಂದಾಪುರ(ಜ.10): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 2ನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಉಡುಪಿಯ ವತಿಯಿಂದ ಕಾಪುವಿನಲ್ಲಿ ನಡೆದ 25ನೇ ಶ್ರೀ ನಾರಾಯಣ ಗುರು ಟ್ರೋಫಿ- ಓಪನ್ ಆಂಡ್ ಯೇಜ್ ಕ್ಯಾಟಗರಿ ರ್ಯಾಪಿಡ್ ಚೆಸ್ ಟೂರ್ನಮೆಂಟ್-2025, 9ರ ವಯೋಮಾನದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ 6 ರೌಂಡ್ಸ್ ಗಳಲ್ಲಿ 5 ಪಾಯಿಂಟ್ಸ್ ಗಳನ್ನು ಗಳಿಸಿ ನಾಲ್ಕನೇ ಸ್ಥಾನವನ್ನು ಪಡೆದಿರುತ್ತಾನೆ. ಈ ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ಮುಖ್ಯ ಶಿಕ್ಷಕರು, ಬೋಧಕ- ಬೋಧಕೇತರ ವರ್ಗದವರು ಅಭಿನಂದಿಸಿದರು.