ಕುಂದಾಪುರ(ಜ.17): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 2ನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ದ ಸಹಯೋಗದಲ್ಲಿ ಆಯೋಜಿಸಲ್ಪಟ್ಟ ಯುವ ಆಲ್ ಇಂಡಿಯಾ ಫ್ಲಡ್ ಲೈಟ್ 2025 ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ಅಂಡರ್ 8 ಬಾಯ್ಸ್ ಕೆಟಗರಿಯಲ್ಲಿ ಭಾಗವಹಿಸಿ, ದ್ವಿತೀಯ ರನ್ನರ್ ಆಪ್ ಆಗಿ ಹೊರಹೊಮ್ಮಿದ್ದಾನೆ. ಈ ವಿಜೇತ ಬಾಲ ಚೆಸ್ ಪಟುವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು