ಕುಂದಾಪುರ(ಫೆ.4): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿನಿ ಅವನಿ ಎ. ಶೆಟ್ಟಿಗಾರ್ ಇವಳು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತವನ ಟ್ರಸ್ಟ್(ರಿ.) ಹಾಗೂ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಕಾರದೊಂದಿಗೆ ಧರ್ಮಸ್ಥಳದಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ.
ಈ ಸಾಧನೆಗೈದ ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.