

ಕೋಲಾರ : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ನ್ನು ಇಂದು ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಕಳೆದ ವರ್ಷ ರೂ.3.71ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು, ಪ್ರಸಕ್ತ ಸಾಲಿನಲ್ಲಿ ಬಜೆಟ್ ಗಾತ್ರ ರೂ.4.09ಲಕ್ಷ ಕೋಟಿಗೆ ಏರಿಸಲಾಗಿದೆ.
2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಿಸಲಾಗಿದ್ದ, ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಈ ಬಾರಿಯ ಬಜೆಟ್ನಲ್ಲಿಯೂ ಅದಕ್ಕಾಗಿ 51340 ಕೋಟಿಗಳ ಅನುದಾನವನ್ನು ಮೀಸಲಿರಿಸಿದೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್ ಸುರೇಶ ಅವರು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಮೇಲೆ ವಿಶೇಷ ಗಮನಹರಿಸಿರುವ ಮಾನ್ಯ ಮುಖ್ಯಮಂತ್ರಿಗಳು ಕೋಲಾರಕ್ಕಾಗಿ ಭರಪೂರ ಕೊಡುಗೆಗಳನ್ನು ಬಜೆಟ್ನಲ್ಲಿ ನೀಡಿದ್ದಾರೆ.
ಕೋಲಾರದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಬೆಳೆಗೆ ಪ್ರತಿ ಕ್ವಿಂಟಾಲ್ಗೆ ರೂ.7550ಗಳ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ ರೂ.450 ಗಳ ಪ್ರೋತ್ಸಾಹಧನವನ್ನು ಘೋಷಣೆ ಮಾಡಲಾಗಿದೆ.
ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೋಲಾರ ಜಿಲ್ಲೆಯ ಕೆ.ಜಿ.ಎಫ್ನಲ್ಲಿ ಆಧುನಿಕ ಎ.ಪಿ.ಎಂ.ಸಿ ಮಾರುಕಟ್ಟೆ ನಿರ್ಮಾಣ ಘೋಷಣೆ ಸ್ವಾಗತಾರ್ಹ, ಅಂತೆಯೇ ಕೋಲಾರ ತಾಲ್ಲೂಕಿನ ನರಸಾಪುರ ಕೈಗಾರಿಕ ವಲಯದಲ್ಲಿ ರೂ.173ಕೋಟಿಗಳ ವೆಚ್ಚದಲ್ಲಿ 6000 ಸಾಮರ್ಥ್ಯದ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಯೋಜನೆ ಘೋಷಣೆ ಮಾಡಿರುವುದು, ದುಡಿಯುವ ಮಹಿಳೆಯರಿಗೆ ಹೆಚ್ಚಿನ ಉತ್ತೇಜನ ನೀಡಿದಂತಾಗಿದೆ.
ಇಂಜನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಒಬಿಸಿ ವಿದ್ಯಾರ್ಥಿಗಳಿಗಾಗಿ ಎರಡು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಘೋಷಣೆ ಮಾಡಲಾಗಿದೆ. ಜಿಲ್ಲೆಯ ಒಂದು ವಸತಿ ಶಾಲೆಯನ್ನು ಪಿ.ಯು ಕಾಲೇಜಾಗಿ ಉನ್ನತಿಕರಿಸಿ ಘೋಷಿಸಲಾಗಿದೆ.
ಇದಲ್ಲದೇ ಉತ್ಕೃಷ್ಟ ವೈದ್ಯಕೀಯ ಶಿಕ್ಷಣ ಸೌಲಭ್ಯ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮುಂದಾಗಿರುವುದು, ಅತೀವ ಸಂತೋಷವನ್ನು ಉಂಟು ಮಾಡಿದೆ. ಮಾಲೂರು ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಮುಂದಾಗಿರುವುದು ಸಹ ಸರ್ಕಾರಕ್ಕೆ ಸಾರ್ವಜನಿಕರ ಆರೋಗ್ಯ ಮೇಲಿನ ಕಾಳಜಿಯನ್ನು ತೊರಿಸುತ್ತದೆ.
ಮಾಲೂರು ತಾಲ್ಲೂಕಿನ ಶಿವಾರ ಪಟ್ಟಣ ಕೈಗಾರಿಕ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ Multi Sector Net Zero Sustainability Industrial Park ನ್ನು ನಿರ್ಮಾಣ ಮಾಡಲು ಕೈಗೆತ್ತಿಕೊಂಡಿರುವುದು ಸ್ವಾಗತಾರ್ಹ.
ಸರ್ಕಾರವು ಕೋಲಾರ ಜಿಲ್ಲೆಯಲ್ಲಿ ಹೊಸ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಗೆ ಮುಂದಾಗಿದೆ.
ಕೆ.ಜಿ.ಎಫ್ ಭಾರತೀಯ ಮೀಸಲುಪಡೆ ಸ್ಥಾಪಿಸಲು ರೂ.40ಕೋಟಿಗಳ ಮೀಸಲಿರಿಸಲಾಗಿದೆ. ಕೆ.ಜಿ.ಎಫ್ನಲ್ಲಿ ತಾಲ್ಲೂಕು ಪ್ರಜಾಸೌಧ ಲೋಕಾರ್ಪಣೆಗೆ ಸಿದ್ದಗೊಂಡಿದೆ. ಅನುದಾನವನ್ನು ಕೃಷಿ, ತೋಟಗಾರಿಕೆ, ಶಿಕ್ಷಣ, ನೀರಾವರಿ, ಆರೋಗ್ಯ ಸೇರಿದಂತೆ ಸೇವಾ ಕ್ಷೇತ್ರಗಳಿಗೆ ನಮ್ಮ ಸರ್ಕಾರ ಹೆಚ್ಚು ಒತ್ತು ನೀಡಿ ರಾಜ್ಯದ ಸರ್ವಜನರ ಅಭಿವೃದ್ಧಿಗೆ ಪೂರಕವಾದ ಬಜೆಟ್ ನ್ನು ಮಾನ್ಯ ಮುಖ್ಯಮಂತ್ರಿಗಳು ಇಂದು ಮಂಡಿಸಿದ್ದಾರೆ. ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ಪೂರಕ ಬಜೆಟ್ ನ್ನು ಮಂಡಿಸಿದ ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಒಂದು ಟ್ರಿಲಿಯನ್ ಆರ್ಥಿಕ ರಾಜ್ಯವಾಗುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನು ಇರಿಸಿರುವ ಮಾನ್ಯ ಮುಖ್ಯಮಂತ್ರಿಗಳು ಸರ್ವಜನರ ಅಭಿವೃದ್ಧಿಗಾಗಿ ಸಮ-ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿದ್ದು, ಎಲ್ಲರಿಗೂ ಅನುಕೂಲ