

ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ ಪದವಿ ವಿದ್ಯಾರ್ಥಿಗಳು ದಿನಾಂಕ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಶಾಸ್ತ್ರಿ ಸರ್ಕಲ್ ನಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಜನರ ಗಮನಸೆಳೆದರು. ಕುಂದಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಪುಷ್ಪಾ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು ಹಾಗೂ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳಷ್ಟೇ ಸಮಾನತೆ ಕೊಟ್ಟರೆ ಏನನ್ನಾದರೂ ಸಾಧಿಸಬಲ್ಲಳು ಎಂದು ತಿಳಿ ಹೇಳಿದರು. ಹೆಣ್ಣು ಮಕ್ಕಳು ಕೇವಲ ನಾಲ್ಕು ಗೋಡೆಯ ಒಳಗೆ ಮಾತ್ರ ಸೀಮಿತವಲ್ಲಾ ಎಂದು ತಿಳಿ ಹೇಳಿ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿದರು.ಈ ಸಂದರ್ಭದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ, ಪ್ರೊ. ಕಾವ್ಯ ಮತ್ತು ಪ್ರೊ. ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಎಂ.ಬಿ.ಎ ವಿದ್ಯಾರ್ಥಿನಿ ಕು. ಸಹರ ನಿರೂಪಣೆಮಾಡಿದರು ಮತ್ತು ವಂದನಾರ್ಪಣೆಗೈದರು.
