

ಕಾರ್ಕಳ : ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಅಧಿಕ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾವಣೆ ಮಾಡಿರುವ, ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ವಿವಿಧ ರಾಜ್ಯದ ಮಹಿಳೆಯಾರನ್ನು ಅಭಿನಂದಿಸಲಾಯಿತು. ಉಡುಪಿ ಮಹಿಳಾ ಕಾಂಗ್ರೆಸ್ ಸದಸ್ಯೆ, ಕಾರ್ಕಳ ಮಹಿಳಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಅನಿತಾ ಡಿಸೋಜಾ ಬೆಳ್ಮಣ್ ರವರಿಗೆ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಅಲ್ಕಾ ಲಂಬಾರವರು ಅಭಿನಂದನೆ ಮತ್ತು ಪ್ರಮಾಣಪತ್ರವನ್ನು ನವದೆಹಲಿಯ ಇಂದಿರಾ ಭವನದಲ್ಲಿ ಮಾರ್ಚ್ 8ರಂದು ನೀಡಿ ಗೌರವಿಸಿದರು. ಅನಿತಾ ಡಿಸೋಜಾ ಬೆಳ್ಮಣ್ ಅವರು ವಿವಿಧ ಸಂಘಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರೀಯರಾಗಿ ಸಮಾಜಸೇವೆ ಸಲ್ಲಿಸುತ್ತಿದ್ದಾರೆ.


