

ಕುಂದಾಪುರ :ಕುಂದಾಪುರದ ಭಂಡಾರ್ಕಾರ್ಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜಿಗೆ ಪ್ರಧಾನಮಂತ್ರಿ ಕೌಶಲ ಕೇಂದ್ರ ಸ್ಥಾಪನೆಗೆ ಅನುಮತಿ ದೊರೆತಿದೆ.
ಭಾರತದ ಕೇಂದ್ರ ಸರ್ಕಾರದ ಸ್ಕಿಲ್ ಇಂಡಿಯಾ ಯೋಜನೆಯ ಅಡಿಯಲ್ಲಿ ಯುವ ಜನತೆಯನ್ನು ಉದ್ಯೋಗಕ್ಕೆ ಅಣಿ ಗೊಳಿಸುವ ನಿಟ್ಟಿನಲ್ಲಿ ಈ ಕೇಂದ್ರ ಕಾರ್ಯ ನಿರ್ವಹಿಸಲಿದ್ದು, ಯುವಜನತೆಗೆ ಉಚಿತವಾಗಿ ಕೌಶಲ್ಯಗಳನ್ನು ಈ ಯೋಜನೆ ಅಡಿಯಲ್ಲಿ ನೀಡಲಾಗುವುದು.
ಕರ್ನಾಟಕದ ಮೂರು ಕಾಲೇಜುಗಳಿಗೆ ಈ ಕೇಂದ್ರ ಸ್ಥಾಪನೆಗೆ ಅನುಮತಿ ದೊರಕಿದೆ ಅದರಲ್ಲಿ ನಮ್ಮ ಭಂಡಾರ್ಕಾರ್ಸ್ ಕಾಲೇಜು ಒಂದಾಗಿದೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ