

ಕುಂದಾಪುರ : ದ್ವಿತೀಯ ಪಿ ಯು ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶಂಕರನಾರಾಯಣದ ಮದರ್ ತೆರೇಸಾ’ಸ್ ಪಿ ಯು ಕಾಲೇಜಿಗೆ ರಾಜ್ಯಮಟ್ಟದಲ್ಲಿ ಎರಡು ರ್ಯಾಂಕ್ ಗಳು ದೊರಕಿವೆ ವಾಣಿಜ್ಯ ವಿಭಾಗದಲ್ಲಿ ಕುಮಾರಿ ನಿಶಾ ನಾರಾಯಣ್ ತೊಳಾರ್ 593 (ಶೇ. 98.83)
(ಅರ್ಥಶಾಸ್ತ್ರ -100, ವ್ಯವಹಾರ ಅಧ್ಯಯನ -100,ಲೆಕ್ಕಶಾಸ್ತ್ರ- 100 ಸಂಖ್ಯಾಶಾಸ್ತ್ರ – 100) ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರಾಂಕ್ ಪಡೆದು ವಾಣಿಜ್ಯ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕುಮಾರಿ ಅಕ್ಷಿತಾ 590 (ಶೇ 98.3 ) (ಗಣಿತ-100) ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 9ನೇ ರ್ಯಾಂಕ್ ಪಡೆದು ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿರುತ್ತಾರೆ.
ಅತ್ತ್ಯುತ್ತಮ ಫಲಿತಾಂಶ ದಾಖಲಿಸಿ ಕಾಲೇಜಿಗೆ ಕೀರ್ತಿತಂದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವೃಂದ ಅಭಿನಂದಿಸಿರುತ್ತಾರೆ.

