

ಕುಂದಾಪುರ ; ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ssಸಂಯುಕ್ತ ಪದವಿಪೂರ್ವ ಕಾಲೇಜು ಶೇ. 95.14 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 453 ವಿದ್ಯಾರ್ಥಿಗಳಲ್ಲಿ 431 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 171 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 237 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ವರ್ಷಿತಾ 584 ಅಂಕಗಳನ್ನು ಪಡೆದು ಮೊದಲ ಸ್ಥಾನ ಗಳಿಸಿದ್ದಾರೆ. ಹಾಗೂ ಮಣಿಕಂಠ 583 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಸಂಜನಾ 579 ಅಂಕಗಳನ್ನು ಗಳಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.




ವಾಣಿಜ್ಯ ವಿಭಾಗದಲ್ಲಿ ಕೃತಿ ಅವಭೃತ 591 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 9ನೇ ಸ್ಥಾನಿಯಾಗಿ, ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ರಾಶಿ ಸುವರ್ಣ 589 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 11ನೇ ಸ್ಥಾನಿಯಾಗಿ, ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಶೃದ್ಧಾ 586 ಅಂಕ ಗಳಿಸಿ ತೃತೀಯ ಸ್ಥಾನಿಯಾಗಿದ್ದಾರೆ.
ಇವರನ್ನು ಕುಂದಾಪುರ ಎಜುಕೇಶನ್ ಸೊಸೈಟಿ ಯ ಸಂಚಾಲಕರಾದ
ಶ್ರೀ ಬಿ ಎಂ ಸುಕುಮಾರ ಶೆಟ್ಟಿಯವರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.