

ಕುಂದಾಪುರ (ಎ. 13 ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2025 ಸೀಸನ್ 3 ಸಮ್ಮರ ಕ್ಯಾಂಪ್ನ 6ನೇ ದಿನದಂದು ಮಕ್ಕಳ ಸಂತೆ ನಡೆಯಿತು. ಪ್ರಗತಿಪರ ಕೃಷಿಕರಾದ ಗುಂಡು ಪೂಜಾರಿ ಹರವರಿ ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ ದೇಶದ ಬೆನ್ನೆಲುಬು, ಪ್ರತಿಯೊಬ್ಬರು ನಿಮ್ಮ ಮಕ್ಕಳಿಗೆ ಕೃಷಿ ಚಟುವಟಿಕೆಗಳಲ್ಲಿ ನಿಮ್ಮೊಂದಿಗೆ ನಿಮ್ಮ ಮಕ್ಕಳು ಪಾಲ್ಗೊಳ್ಳುವಂತೆ ಅವರನ್ನು ಪ್ರೊತ್ಸಾಹಿಸಿ ಎಂದರು. ಪ್ರಾಥಮಿಕ ವಿಭಾಗದ ಮಖ್ಯ ಶಿಕ್ಷಕ ಜಗದೀಶ್ ಆಚಾರ್ ಪ್ರಾಸ್ತವಿಕ ನುಡಿಗಳನ್ನಾಡಿದರು. ಮಕ್ಕಳು ತಾವು ತಂದಿರುವ ವಿವಿಧ ತಿಂಡಿ – ತಿನಿಸುಗಳು, ಹಣ್ಣು – ತರಕಾರಿಗಳು ವಿವಿಧ ಬಗೆಯ ಔಷಧೀಯ ಸಸ್ಯಗಳನ್ನು ಮಾರಾಟ ಮಾಡಿ ಹಣ ಸಂಗ್ರಹಿಸುವುದರು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಹಾಗೂ ಎಲ್ಲಾ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಕ್ರಾರ್ಯಕ್ರಮವನ್ನು ಶಿಕ್ಷಕಿ ಆಶಾ ನಿರೂಪಿಸಿ ವಂದಿಸಿದರು.


