

ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿಸತತ 8ನೇ ವರ್ಷವೂ ಕೂಡ 100 % ಫಲಿತಾಂಶ ದಾಖಲಿಸಿದ್ದು 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದಿದ್ದಾರೆ. ಅಂಜಲಿ 610 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಧನ್ಯಶ್ರೀ 580 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ರೋಶ್ನಿ ದಾಸ್.

574 ಅಂಕ ಗಳಿಸಿ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಚಾಲಕರೂ ಕುಂದಾಪುರ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅತೀ ವಂದನೀಯ ಫಾಲ್ ರೇಗೊ ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿ ಡಿ’ಸೋಜ ಎ.ಸಿ., ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.