

ಹುಬ್ಬಳ್ಳಿ: ತಾಲ್ಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೆಎಂಸಿ-ಆರ್ಐ ಆಸ್ಪತ್ರೆಗೆ ಶವ ರವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಶ್ವೇತಾ (29), ಅಂಜಲಿ(26), ಸಂದೀಪ (26), ವಿಠಲ (55) ಮತ್ತು ಶಶಿಕಲಾ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಎಸ್ಪಿ ಗೋಪಾಲ ಬ್ಯಾಕೋಡ, ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐದು ಮಂದಿ ಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.