

ಬೆಂಗಳೂರು, ಮೇ.27; ಬೆಂಗಳೂರು ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ. ನೂರು ವರ್ಷದಲ್ಲೇ ಬೆಂಗಳೂರಲ್ಲಿ ಈ ಬಾರಿ ಬಿದ್ದು,ಮಳೆ ದಾಖಲೆ ಸೃಷ್ಟಿಸಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮೇ ತಿಂಗಳಲ್ಲೇ 307.9 ಮಿಮೀ ಮಳೆ ದಾಖಲೆಯಾಗಿದೆ. 2023 ಮೇ ತಿಂಗಳಲ್ಲಿ 305.4 ಮಿಮೀ ಮಳೆ ದಾಖಲಾಗಿತ್ತು. ಇದು ಇಲ್ಲಿಯವರೆಗಿನ ದಾಖಲೆಯಾಗಿತ್ತು. ಈ ದಾಖಲೆಯನ್ನು ಈ ಬಾರಿಯ ಮಳೆ ಮುರಿದಿದೆ ಎಂದು ಅವರು ಹೇಳಿದ್ದಾರೆ.
ವಾಡಿಕೆಯಂತೆ ಜೂನ್ 5ಕ್ಕೆ ಮುಂಗಾರು ಆಗಮನದ ನಿರೀಕ್ಷೆ ಇತ್ತು. ಆದರೆ ಮೇ 24 ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಸಂಪೂರ್ಣ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದೇ ಮೇ 30 ರ ವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.



