

ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ದಿನಾಂಕ 31 ಮೇ 2025 ರಂದು ವಿಶ್ವ ತಂಬಾಕು ನಿಷೇಧ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಪ್ರಥಮ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳು ತಂಬಾಕಿನಿಂದಾಗುವ ದುಷ್ಟಪರಿಣಾಮಗಳನ್ನು ತೋರಿಸುವ ಒಂದು ಕಿರು ನಾಟಕವನ್ನು ಪ್ರದರ್ಶಿಸುವ ಮೂಲಕ ಜನಜಾಗೃತಿಯನ್ನು ಮೂಡಿಸಿದರು. ಕಾರ್ಯಕ್ರಮ ದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿಯವರು ಉಪಸ್ಥಿತರಿದ್ದು ವಿದ್ಯಾರ್ಥಿಗಳ ಜನಜಾಗೃತಿ ಮೂಡಿಸುವ ಪ್ರಯತ್ನವನ್ನು ಹೊಗಳಿದರು. ಅಸಿಸ್ಟೆಂಟ್ ಪ್ರೊಫೆಸರ್ ಚೈತಾಲಿ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿಭಾಗದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

