

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿಗಳನ್ನು ಅನುಷ್ಠಾನಗೊಳಿಸಲು ಮತ್ತು ಪ್ರಾಧಿಕಾರ ಕಚೇರಿಯಲ್ಲಿ ತಾಂತ್ರಿಕ ಸಿಬ್ಬಂದಿಗಳನ್ನು ಹೆಚ್ಚಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದ ನಿಯೋಗವು , ನಗರ ಮತ್ತು ಗ್ರಾಮಾಂತರ ಯೋಜನೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ಡಾ. ಪಂಕಜ ಎಂ ಎಸ್ ರವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.
ಭಿನ್ನವಾದ ಭೌಗೋಳಿಕ ಹಿನ್ನೆಲೆ ಹೊಂದಿರುವ ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರತ್ಯೇಕ ಕರಾವಳಿ ವಲಯ ನಿಯಮಾವಳಿ ರಚಿಸಬೇಕೆಂದು ಒತ್ತಾಯಿಸಲಾಯಿತು.
9/11 ನಿಯಮಗಳ ಸರಳಿಕಣ ,ಕಟ್ ಕನ್ವರ್ಷನ್ , ರಸ್ತೆ ಮಾರ್ಜಿನ್ ಕಡಿತಗೊಳಿಸಲು ಹಾಗೂ ಫೈಲ್ ವಿಲೇವಾರಿಗಳನ್ನು ತ್ವರಿತಗೊಳಿಸಲು ಹೆಚ್ಚಿನ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಲು ಮನವಿಯಲ್ಲಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಸದಾಶಿವ ಉಳ್ಳಾಲ , ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ದಿನಕರ ಹೆರೂರು , ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ , ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಮುಸ್ತಾಫ್, ಮೂಡುಬಿದ್ರೆ ನಗರ ಪ್ರಾಧಿಕಾರ ಅಧ್ಯಕ್ಷರಾದ ಹರ್ಷವರ್ಧನ ಜೈನ್ ಇನ್ನಿತರರು ನಿಯೋಗದಲ್ಲಿ ಉಪಸ್ಥಿತರಿದ್ದರು.



