

ವಿಜಯ ಕರ್ನಾಟಕ ದಿನಪತ್ರಿಕೆಯವರು ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಶಾಲೆಯ ವಿದ್ಯಾರ್ಥಿಗಳು ತಮ್ಮ ಕಲಾ ನೈಪುಣ್ಯದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಕ್ಕಳಲ್ಲಿರುವ ಕಲ್ಪನಾ ಶಕ್ತಿ ಮತ್ತು ಭಾವನೆಗಳನ್ನು ಅಭಿವ್ಯಕ್ತ ಪಡಿಸುವ ಉದ್ದೇಶದಿಂದ ಹಾಗೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಜಯ ಕರ್ನಾಟಕ ದಿನ ಪತ್ರಿಕೆಯು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರೊಂದಿಗೆ ಶ್ಯಾಮಿಲಿ ಸಭಾಭವನ ಅಂಬಲಪಾಡಿ ಉಡುಪಿ ಇಲ್ಲಿ ದಿನಾಂಕ 6/7 2025 ರಂದು ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಶಾಲೆಯ ವಿದ್ಯಾರ್ಥಿಗಳಾದ ರಶ್ಮಿತಾ .ಆರ್ 8ನೇ ತರಗತಿ ಹಾಗೂ ಶ್ರೀಕರ್ ಭಟ್6ನೇ ತರಗತಿ ಇವರು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಕೀರ್ತಿಯನ್ನು ಜಿಲ್ಲಾ ಮಟ್ಟಕ್ಕೆ ಕೊಂಡೊಯ್ದು ಕಲಾ ಸಾಧಕರ ಸಾಧನೆಯನ್ನ ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು ಪ್ರಶಂಸಿಸಿದ್ದಾರೆ

