

ಕುಂದಾಪುರ: ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದಿಂದ ಪ್ರಾಯೋಜಿಸಲ್ಪಟ್ಟ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರನ್ನಾಗಿ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ.ಶಾಂತಾರಾಮ್ ಪ್ರಭು ಅವರನ್ನು ಆಯ್ಕೆ ಮಾಡಲಾಗಿದೆ.
ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಾಲೇಜಿನ ಹಿರಿಯ ವಿಶ್ವಸ್ಥರಾದ ಪ್ರಕಾಶ್.ಟಿ.ಸೋನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ ಯು.ಎಸ್.ಶೆಣೈ ಅವರನ್ನು ನೇಮಕ ಮಾಡಲಾಯಿತು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.



