

ಕೋಲಾರ : ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುವಾಗ ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಅಧಿಕಾರಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಸುರೇಶ್ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 4ನೇ ತ್ರೈಮಾಸಿಕದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸರ್ಕಾರದ ಸವಲತ್ತುಗಳನ್ನು ಸಾಮಾನ್ಯರಿಗೆ ತಲುಪಿಸಲು ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯೋನ್ಮುಖರಾಗಬೇಕು. ಹೀಗೆ ವಿತರಿಸುವ ಸವಲತ್ತುಗಳ ಬಗ್ಗೆ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ ಅವರನ್ನು ಕಾರ್ಯಕ್ರಮದಲ್ಲಿ ಒಳಗೊಳ್ಳಬೇಕು ಎಂದು ತಿಳಿಸಿದರು.
ಸಭೆಯ ಆರಂಭದಲ್ಲಿ ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು ನರ್ಸರಿ ಕಾಯ್ದೆ, ಬಿತ್ತನೆ ಬೀಜ, ಕೃಷಿ ಪರಿಕರ ಮುಂತಾದ ಸೌಲಭ್ಯಗಳನ್ನು ಪ್ರತ್ಯೇಕವಾಗಿ ತಾಲ್ಲೂಕು ಮಟ್ಟದಲ್ಲಿ ವಿತರಿಸುವ ಬದಲು ಜಿಲ್ಲಾ ಮಟ್ಟದಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಫಲಾನುಭವಿಗಳ ಸೌಲಭ್ಯ ವಿತರಣಾ ಸಮಾವೇಶವನ್ನು ಜರುಗಿಸುವ ಮೂಲಕ ಸೌಲಭ್ಯಗಳನ್ನು ವಿತರಿಸುವುದು ಸೂಕ್ತ ಎಂದು ಅಭಿಪ್ರಾಯಿಸಿದರು.
ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಶೇಕಡಾ 89 ರಷ್ಟು ಪ್ರಗತಿ ಸಾಧನೆಯಾಗಿದೆ. ಆದರೆ ಕೆಲವು ಉಪಯುಕ್ತ ಯೋಜನೆಗಳು ರೈತರಿಗೆ ತಲುಪುತ್ತಿಲ್ಲ. ಅವರಿಗೆ ತೋಟಗಾರಿಕಾ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಯೋಜನೆಗಳನ್ನು ಬಳಸಿಕೊಳ್ಳುವ ಬಗ್ಗೆ ಅವರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಮಾಲೂರಿನ ಶಾಸಕ ಕೆ.ವೈ.ನಂಜೇಗೌಡ ಅವರು ಮಾತನಾಡಿ ನರ್ಸರಿಗಳನ್ನು ತೋಟಗಾರಿಕಾ ಇಲಾಖೆ ಸುಪರ್ದಿಗೆ ತರಬೇಕು ಎಂದು ಸೂಚಿಸಿದರು.
ಜಿಲ್ಲೆಯ ರೈತರು ಮತ್ತು ಮಾವು ಬೆಳೆಗಾರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನನ್ನನ್ನು ಭೇಟಿ ಮಾಡಿ, ಮಾವುಗೆ ಸರ್ಕಾರವು ಬೆಂಬಲ ಬೆಳೆ ಘೋಷಿಸಬೇಕು ಎಂದು ಮನವಿ ಮಾಡಿದಾಗ ಕೇವಲ ಒಂದು ವಾರದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮಾವುಗೆ ರೂ.4/- ಬೆಂಬಲ ಬೆಲೆಯನ್ನು ಘೋಷಿಸಲಾಗಿದೆ ಹಾಗೂ ವ್ಯಾಪಾರಸ್ಥರು ಮಾವು ಖರೀದಿ ಮಾಡಲು ಬೆಲೆಯನ್ನು ನಿಗಧಿಪಡಿಸಬೇಕೆಂದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ ಪ್ರಸ್ತುತ ಪಶುವೈದ್ಯರನ್ನು ಹೊರಗುತ್ತಿಗೆ ಆಧಾರದ ಮೇಲೆ ತುಂಬಲು ಸರ್ಕಾರದಿಂದ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು. ಪ್ರಸ್ತಾವನೆಯ ಪ್ರತಿಯನ್ನು ಸಲ್ಲಿಸುವಂತೆ ತಿಳಿಸಿದ ಸಚಿವರು ಪ್ರಸ್ತಾವನೆಯನ್ನು ನಿಕಟವಾಗಿ ಅನುಸರಿಸಿ ಯಾರ ಬಳಿ ಕಡತ ಇದೆಯೋ ಅದನ್ನು ತಿಳಿಸಿದಲ್ಲಿ ಶೀಘ್ರವಾಗಿ ಮಂಜೂರಾತಿಗೆ ಕ್ರಮವಹಿಸಲಾಗುವುದು ಎಂದರು. ಶಾಸಕ ಕೆ.ವೈ.ನಂಜೇಗೌಡ ಅವರು ಮಾತನಾಡಿ ಈ ಹಿಂದೆ ನಡೆಸುತ್ತಿದ್ದಾ, ವಾರ್ಷಿಕ ಜಾನುವಾರು ಆರೋಗ್ಯ ಶಿಬಿರಗಳನ್ನು ಹೆಚ್ಚಿಗೆ ಮಾಡಲು ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಕಳಪೆಯಾಗಿರುವುದಕ್ಕೆ ತರಾಟೆಗೆ ತೆಗೆದುಕೊಂಡ ಸಚಿವರು ಪ್ರಸಕ್ತ ಸಾಲಿನಲ್ಲಿ ಅಗ್ರ 10 ರಲ್ಲಿ ಕೋಲಾರ ಜಿಲ್ಲೆ ಇರುವಂತೆ ನೋಡಿಕೊಳ್ಳಲು ಕಾರ್ಯ ಯೋಜನೆ ರೂಪಿಸಿಕೊಂಡು ಪ್ರತಿ ಶಿಕ್ಷಕರಿಗೆ ತಲಾ 10 ವಿದ್ಯಾರ್ಥಿಗಳಂತ ಜವಾಬ್ದಾರಿ ವಹಿಸಬೇಕು ಎಂದು ಸೂಚಿಸಿ ವಸತಿ ಶಾಲೆಗಳ ಪಲಿತಾಂಶ ಕಡಿಮೆಯಾಗಿರುವುದಾಗಿ ಪ್ರಸಕ್ತ ಸಾಲಿನಲ್ಲಿ ಫಲಿತಾಂಶ ಸುಧಾರಣೆಗೆ ಈಗೀನಿಂದಲೇ ಕ್ರಮವಹಿಸಲು ಸೂಚಿಸಿದರು.
ವಿಧಾನ ಪರೀಷತ್ ಸದಸ್ಯರಾದ ನಸೀರ್ ಅಹಮದ್ ಅವರು ಮಾತಾನಾಡಿ ಕೋಲಾರ ಜಿಲ್ಲೆಯಲ್ಲಿ ಆನೇಕ ಶಾಲೆಗಳು ತೆರೆಯಲು ಮಾನದಂಡಗಳನ್ನು ಗಾಳಿಗೆ ತೂರಲಾಗಿದೆ ಅನುಮತಿ ಇಲ್ಲದೇ ಪ್ರೌಢಶಾಲೆಗಳಿಗೆ ದಾಖಲಾತಿ ಮಾಡಲಾಗುತ್ತಿದೆ ಅದರ ಬಗ್ಗೆ ಆಧಿಕಾರಿಗಳು ಕ್ರಮ ಕೈಗೋಳ್ಳಬೇಕು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಹಮತ್ ನಗರ ವ್ಯಾಪ್ತಿಯಲ್ಲಿ ಹೊಸ ಪಿಹೆಚ್ ಕಟ್ಟಲು ಜಾಗ ಮಂಜೂರು ಮಾಡಲಾಗಿದೆ. ಆದರೆ ಕಟ್ಟಡ ಕಟ್ಟಲು ಅನುದಾನ ಮಂಜೂರು ಆಗಬೇಕಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ಇದಕ್ಕೆ ಸಚಿವರು ಶೀಘ್ರದಲ್ಲೇ ಅನುದಾನ ಮಂಜೂರು ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು 2150 ಆಂಗನವಾಡಿಗಳು ಕಾರ್ಯನಿರ್ವಹಿಸುತ್ತಿದೆ ಮುಂದಿನ ದಿನಗಳಲ್ಲಿ ಯುಕೆಜಿ ಮತ್ತು ಎಲ್ಜಿ ಪ್ರಾರಾಂಭಿಸುವುದಾಗಿ ತಿಳಿಸಿದರು ರಾಜ್ಯದಲ್ಲಿ ಬಿಸಿಯುಟ, ಸಾಂಬರು ಪುಡಿ,ಬೆಲ್ಲ, ಸೇರಿದಂತೆ ಇನ್ನಿತರ ಪಾಧಾರ್ಥಗಳ ಬಗ್ಗೆ ದೂರೂಗಳು ಕೇಳಿಬರುತ್ತಿದೆ ಆ ರೀತಿ ನಮ್ಮ ಜಿಲ್ಲೆಯಲ್ಲಿ ಯಾವುದಾದರು ಸಮಸ್ಯೆಗಳು ಇದ್ದಾರೆ ತಿಳಿಸಿ ಎಂದರು.
ಬೆಟ್ಟಿಂಗ್ ದಂಧೆ, ಗಾಂಜಾ ಮಾರಾಟ, ರೌಡಿಸಂ, ಗೂಂಡಗಿರಿ ಸೇರಿದಂತೆ ಅನೈತಿಕ ಚಟುವಟಿಕೆಗಳಲ್ಲಿ ತೋಡಗಿರುವವರನ್ನು ಗಮನಿಸಿ ಸೂಕ್ತಕ್ರಮ ಕೈಗೋಲ್ಲಬೇಕು ಮತ್ತು ಅದನ್ನು ನಿಯಂತ್ರಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವರಿಷ್ಠಾಧಿಕಾರಿಗಳು ಈಗಾಗಲೇ ಆ ಕುರಿತು ವಿಶೇಷ ತಂಡಗಳನ್ನು ರಚಿಸಲಾಗಿದೆ. ಎಲ್ಲಾ ದಂಧೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
ಮಕ್ಕಳ ರಕ್ಷಣಾ ಘಟಕ ಆಧಿಕಾರಿ ಅವರು ಮಾತಾನಾಡಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತವಾಗಿಸಲು ಪಣತೋಟ್ಟಿದ್ದು ಆನೇಕ ಆರಿವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಮತ್ತು ಬಾಲ್ಯ ವಿವಾಹ ಮಾಡಿದರೆ ಅದರಲ್ಲಿ ಪಾಲ್ಗೊಂಡಿರುವವರ ವಿರುದ್ದವು ದೂರು ದಾಖಲಿಸಲಾಗುತ್ತದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಆದಿಕಾರಿ ವಸತಿ ಶಲೆಗಳಲ್ಲಿ ಫಲಿತಾಂಶ ಕಡಿಮೆ ಬಂದಿರುವ ಶಾಲೆಯ ಮುಖ್ಯಶಿಕ್ಷಕರಿಗೆ ನೋಟಿಸ್ ವಿತರಣೆ ಮಾಡಿದ್ದೇವೆ ಮತ್ತು ಮುಂದಿನ ವರ್ಷಕ್ಕೆ ಯೋಜನೆಯನ್ನು ರೂಪಿಸಲಾಗಿದೆ ಎಂದು ಸಿಬ್ಬಂದಿಯ ಕೊರತೆ ಮತ್ತು ಕೆಲವು ಮೂಲ ಸೌಕರ್ಯಗಳ ಕೊರತೆ ಇದ್ದು ಪರಿಹರಿಸಬೇಕು ಎಂದರು
ಸಾಮಾಜಿಕ ಅರಣ್ಯ, ಕಾರ್ಮಿಕ ಮತ್ತು ಕೈಮಗ್ಗ ಮತ್ತು ಜವಳಿ, ಕೈಗಾರಿಕಾ, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು, ಜಿಲ್ಲಾ ಪಂಚಾಯತ್ ಸೇರಿದಂತೆ ಹಲವಾರು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಮೊದಲು ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ಲ್ಯಾಪ್ಟಾಪ್ ಹಾಗೂ ಪ್ರವಾಸಿ ಮಿತ್ರ ಪೊಲೀಸರಿಗೆ ಸಮವಸ್ತ್ರ ವಿತರಣೆ, ಪ್ರವಾಸೋದ್ಯಮ ಇಲಾಖೆಯ ಕಾಫಿ ಟೇಬಲ್ ಪುಸ್ತಕ ಬಿಡುಗಡೆ, ಕೃಷಿ ಇಲಾಖೆಯ ಪೋಸ್ಟರ್ಗಳನ್ನು ಬಿಡುಗಡೆ ಮಾಡಿದರು.
ಸಭೆಯಲ್ಲಿ ಕೆಜಿಎಫ್ ಶಾಸಕರಾದ ರೂಪಕಲಾ ಎಂ.ಶಶಿಧರ್, ಶ್ರೀನಿವಾಸಪುರ ಶಾಸಕರಾದ ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಎಂ.ಎಲ್.ಅನಿಲ್ ಕುಮಾರ್, ವಿಧಾನ ಪರಿಷತ್ ಶಾಸಕರಾದ ಡಿ.ಟಿ.ಶ್ರೀನಿವಾಸ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅನೀಫ್, ಗ್ಯಾರಂಟಿ ಯೊಜನೆಗಳ ಜಿಲ್ಲಾದ್ಯಾಕ್ಷ ಶಿವಕುಮರ್, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್.ಪಿ ಬಾಗೇವಾಡಿ, ಉಪ ಕಾರ್ಯದರ್ಶಿ ರಮೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ್, ಉಪವಿಭಾಗಾಧಿಕಾರಿ ಡಾ. ಮೈತ್ರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ವೇಮಗಲ್ ಕೈಗಾರಿಕ ಪ್ರಾದೇಶದಲ್ಲಿ ಆರಣ್ಯ ಇಲಾಖೆಯಿಂದ ಗೀಡನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ಕೋಲಾರ ಬಸ್ ನಿಲ್ದಾಣದಲ್ಲಿ ನಗರ ಸಾರಿಗೆಯನ್ನು ಉದ್ಘಾಟನೆ ಮಾಡಿ ನಾಲ್ಕು ಬಸ್ಗಳಿಗೆ ಚಾಲನೆ ನೀಡಿದರು, ಕೋಲಾರ ನಗರಸಭೆ ವತಿಯಿಂದ ನೂತನವಾಗಿ ಕೋಲಾರ ಆಗ್ರಿಗೋಲ್ಡ್ ಎಂಬ ಮಳಿಗೆಯನ್ನು ಉದ್ಘಾಟನೆ ಮಾಡಿದರು.
ಬಾಕ್ಸ್: ಕೋಲಾರ ನಗರದಲ್ಲಿ ಸಂಚರಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಸಾರಿಗೆ ಸೇವೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.
ಕೋಲಾರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ನಗರ ಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ನಗರ ಸಾರಿಗೆ ಪ್ರಾರಂಭದಿಂದ ಕೋಲಾರ ನಗರ ಜನತೆಗೆ ಸಾಕಷ್ಟು ಅನುಕೂಲವಾಗಲಿದೆ. ಸಾರ್ವಜನಿಕರ ಸೇವೆಗೆ ಸರ್ಕಾರ ಸದಾ ಬದ್ಧವಾಗಿದೆ. ಸರ್ಕಾರ ಸದೃಢವಾಗಿದ್ದು, ಯಾವುದೇ ಹಣದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ಸಭೆಗೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋಲಾರ ಭಾಗಕ್ಕೆ ಈಗಾಗಲೇ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಎತ್ತಿನಹೊಳೆ, ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿ, ರಿಂಗ್ ರೋಡ್, ನರಸಾಪುರ ಪೊಲೀಸ್ ಠಾಣೆ ಅಭಿವೃದ್ಧಿ ಸಂಬಂಧಿಸಿದಂತೆ ಚರ್ಚಿಸಲಾಗುವುದು ಎಂದರು.







