

ಶಂಕರನಾರಾಯಣ; ಮದರ್ ತೆರೆಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣದಲ್ಲಿ ಗುರು ಪೂರ್ಣಿಮೆ ದಿನದ ಸಂಭ್ರಮಾಚರಣೆ ಗುರು ಎಂದರೆ ವ್ಯಕ್ತಿಯಲ್ಲ ಅದೊಂದು ಶಕ್ತಿ. ಗುರು ಶಿಷ್ಯರ ನಡುವೆ ಇರುವ ಪವಿತ್ರ ಬಾಂಧವ್ಯದ ಪ್ರತೀಕವಾದ ಗುರುಪೂರ್ಣಿಮೆ ದಿನವನ್ನು ಮದರ್ ತೆರೆಸಾ ಮೆಮೋರಿಯಲ್ ಶಾಲಾ ವಿಭಾಗದಲ್ಲಿ ದಿನಾಂಕ 10 /7 2025 ರಂದು ಭಾವಪೂರ್ವಕವಾಗಿ ಆಚರಿಸಲಾಯಿತು . ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗುರುವಿನ ಮೇಲೆ ಇರುವ ಭಕ್ತಿ ಹಾಗೂ ಗುರು ಶಿಷ್ಯರ ನಡುವಿನ ಬಾಂಧವ್ಯವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಪ್ರಹಸನ ,ಭಾಷಣ ನೃತ್ಯ ಹಾಗೂ ಸಂಗೀತದ ಮೂಲಕ ತಿಳಿಸಿದರು. ಗುರುಗಳ ಆಶೀರ್ವಾದವನ್ನು ಪಡೆದ ವಿದ್ಯಾರ್ಥಿಗಳಲ್ಲಿ ವಿದ್ಯೆಯ ಜೊತೆಗಿರುವ ಸಂಸ್ಕಾರವನ್ನು ಗುರುತಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಮತಾ ಪೂಜಾರಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸಿದರು. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಗುರುವಿನ ಮಹತ್ವವನ್ನು ಸಾರುವ ಮೂಲಕ ಗುರು ಪೂರ್ಣಿಮಾ ಕಾರ್ಯಕ್ರಮವು ಅರ್ಥ ಪೂರ್ಣ ವಾಗಿ ನೆರವೇರಿತು. ಈ ಸಂಭ್ರಮಾಚರಣೆಯಲ್ಲಿ ಆಡಳಿತ ಮಂಡಳಿಯವರು ಶಿಕ್ಷಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.








