

ಉಡುಪಿ,ಜು.11; ಇಂದು ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ದೋಣಿ ಮಗುಚಿ ಮೃತಪಟ್ಟ ಉದ್ಯಾವರ ಗ್ರಾಮದ ಪಿತ್ರೋಡಿಯ ಮೀನುಗಾರ ನೀಲಾಧರ ಜಿ. ತಿಂಗಳಾಯ ರವರ ಮನೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿಯವರೊಂದಿಗೆ ಸಮಾಲೋಚನೆ ನಡೆಸಿ ಮೀನುಗಾರಿಕೆ ಇಲಾಖೆ ಸಚಿವರಾದ ಶ್ರೀ ಮಾಂಕಾಳ ವೈದ್ಯ ರವರಿಗೆ ಘಟನೆಯ ಮಾಹಿತಿ ನೀಡಿ, ತಕ್ಷಣ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ₹10 ಲಕ್ಷ ಪರಿಹಾರವನ್ನು ಒದಗಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಪು ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ರಾಜೇಶ್ ಕುಂದರ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಸಚಿನ್ ಸುವರ್ಣ, ಶ್ರೀ ಚೇತನ್, ನಾಡದೋಣಿ ಮೀನುಗಾರ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

