

ಮಂಗಳೂರು; ಎಂಆರ್ ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಯನಿರ್ವಾಹಕ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಹಾಗೂ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಸುರತ್ಕಲ್ ನಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಪ್ರಯಾಗ್ ದೀಪಚಂದ್ರ ಭಾರ್ತಿಯಾ ಮತ್ತು ಕೇರಳದ ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ
ವಿಷಾನಿಲ ಸೋರಿಕೆಯಾಗಿ ತೀವ್ರ ಅಸ್ವಸ್ಥಗೊಂಡ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವಿನಾಯಕ ಮೈಗೇರಿ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಮಂಗಳೂರು ನಗರದ ಕಮಿಶನರ್ ಸುಧೀರ್ ಕುಮಾರ್ ತನೆಖೆ ನೆಡಸಲಾಗುವುದೆಂದು ತಿಳಿಸಿದ್ದಾರೆ.

