

ಕೋಲಾರ, ಜು.22.ಕಣ್ಣಿನ ಆರೋಗ್ಯ ದೃಷ್ಟಿಯಿಂದ ಪ್ರತಿಯೊಬ್ಬರೂ ಕನಿಷ್ಠ ಆರು ತಿಂಗಳಿಗೆ ಒಮ್ಮೆಯಾದರೂ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವಂತೆ ಹಿರಿಯ ಪತ್ರಕರ್ತರು ಹಾಗೂ ಪ್ರಜಾವಾಣಿ ಪತ್ರಿಕೆಯ ಜಿಲ್ಲಾ ವರದಿಗಾರರಾದ ಓಂಕಾರ್ ಮೂರ್ತಿ ತಿಳಿಸಿದರು.
ನಗರದ ಕ್ಲಾಕ್ ಟವರ್ ಬಳಿ ಇರುವ ನೇತ್ರದೀಪ ಜಿ.ಇ.ಎಫ್ ಕಣ್ಣಿನ ಆಸ್ಪತ್ರೆ ಮತ್ತು ದ್ರಾವಿಡ ವಿಮೋಚನಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಪ್ರಸ್ತುತ ಹೆಚ್ಚಿನ ಮಕ್ಕಳು ಮೊಬೈಲ್ ನೋಡುವುದನ್ನು ಅಭ್ಯಾಸ ಮಾಡಿಕೊಂಡಿರುವುದರಿಂದ ಹಲವು ರೀತಿಯ ಕಣ್ಣಿನ ಸಮಸ್ಯೆಗಳು ಕಂಡುಬರುತ್ತಿದೆ.ಕಣ್ಣಿನ ಸಮಸ್ಯೆಗಳ ಪರಿಹಾರಕ್ಕೆ ಕನಿಷ್ಟ ಆರು ತಿಂಗಳಿಗೆ ಒಮ್ಮೆ ಮಕ್ಕಳ ಕಣ್ಣುಗಳ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆ ಪಡೆಯುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟರು.
ಆಸ್ಪತ್ರೆಯ ವೈದ್ಯ ಡಾ.ವಿನಯ್. ಡಿ. ಮಾತನಾಡಿ ಬಹುತೇಕ ಸಕ್ಕರೆ ಖಾಯಿಲೆ ಇರುವವರಿಗೆ ಗ್ಲುಕೋಮ ಖಾಯಿಲೆಯಿಂದ ಕಣ್ಣಿನ ದೃಷ್ಟಿ ಕಳೆದು ಕೊಂಡು ಕುರುಡಾಗುತ್ತಿದ್ದಾರೆ.ಖಾಯಿಲೆ ಉಲ್ಬಣವಾಗುವ ಮೊದಲೇ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ
ಗ್ಲುಕೋಮ ಖಾಯಿಲೆ ತಡೆಯಲು ಸಾಧ್ಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಅತ್ಯವಶ್ಯಕ ಎಂದರು.
ವಿಷೇಶವಾಗಿ ಶಾಲಾ ಮಕ್ಕಳಿಗೆ ಶಿಬಿರದಲ್ಲಿ ತಪಾಸಣೆ ಮಾಡಲಾಯಿತು.ಸುಮಾರು ನೂರಕ್ಕೂ ಹೆಚ್ಚು ಸಾರ್ವಜನಿಕರು ಹಾಗೂ ಪತ್ರಕರ್ತರು ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಂಡರು. ಈ ಸಂಧರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ರಾಕೇಶ್ ಸಾಯಿ,ದ್ರಾವಿಡ ವಿಮೋಚನಾ ಸಂಘದ ಅಧ್ಯಕ್ಷರಾದ ಕೆ.ಎಂ.ಅನಂತ ಕೀರ್ತಿಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

