

ಕೋಲಾರ, ಆಗಸ್ಟ್ 18 ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಅರ್ಥಪೂರ್ಣ ಆಚರಣೆಗೆ ಪ್ರತಿಯೊಬ್ಬರೂ ನೆರವಾಗಬೇಕು’ ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಹೇಳಿದರು.
ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಶಾಂತಿ ಪಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
“ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಬಣ್ಣಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಪರಿಸರ ಸ್ನೇಹಿ ವಿಗ್ರಹಗಳ ಪ್ರತಿಷ್ಠಾಪನೆ ಮಾಡಬೇಕು. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳ ಸ್ಥಾಪನೆ ಮಾಡಬೇಕು. ಸರ್ಕಾರ ರೂಪಿಸಿರುವ ನಿಯಮಗಳನ್ನು ಪಾಲಿಸಬೇಕು’ ಎಂದು ಸಲಹೆ ನೀಡಿದರು.
ಎಲ್ಲ ಸಮಾಜದವರು ಭಾವೈಕ್ಯದಿಂದ ಹಬ್ಬ ಆಚರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬಳಸಬೇಕು. ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆ
ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ಅನುದಾನ ಬಿಡುಗಡೆ
ಶ್ರೀನಿವಾಸಪುರ : ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಖರೀದಿಗೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ತಿಳಿಸಿರುವಂತೆ, 1 ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳಿಗೆ (1-5ನೇ ತರಗತಿ ಪ್ರತಿ ಮಕ್ಕಳಿಗೆ ರೂ.265, 6-8ನೇ ತರಗತಿಗೆ ರೂ.295 ಹಾಗೂ 9-10ನೇ ತರಗತಿಗೆ ರೂ.325) ಶೂ ಮತ್ತು ಸಾಕ್ಸ್ ವಿತರಣೆಗಾಗಿ ಅನುದಾನವನ್ನು ಸ್ಯಾಟ್ಸ್ ತಂತ್ರಾಂಶದ ಅಂಕಿ-ಅಂಶ ಆಧಾರವಾಗಿ ನೇರವಾಗಿ ಎಸ್ಡಿಎಂಸಿ ಖಾತೆಗಳಿಗೆ ಜಮಾ ಮಾಡಲಾಗಿದೆ.
ಶಾಲಾ ಮುಖ್ಯಶಿಕ್ಷಕರು ರಾಷ್ಟ್ರ ಮಟ್ಟದ ಹೆಸರಾಂತ ಕಂಪನಿಗಳ ಅಧಿಕೃತ ಮಾರಾಟಗಾರರಿಂದ ಉತ್ತಮ ಗುಣಮಟ್ಟದ ಒಂದು ಜೋಡಿ ಶೂ ಹಾಗೂ ಎರಡು ಜೋಡಿ ಸಾಕ್ಸ್ ಖರೀದಿಸಿ ವಿದ್ಯಾರ್ಥಿಗಳಿಗೆ ವಿತರಿಸಲು ಸೂಚಿಸಲಾಗಿದೆ. ಅನುದಾನದ ಮೊತ್ತದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮುಖ್ಯಶಿಕ್ಷಕರು ತಮ್ಮ ವ್ಯಾಪ್ತಿಯ ಸಿಆರ್ಪಿಗಳ ಮೂಲಕ ಕಚೇರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶ್ರೀನಿವಾಸಪುರ ಅವರು ತಾಲ್ಲೂಕಿನ ಎಲ್ಲಾ ಸರ್ಕಾರಿ ಕಿರಿಯ/ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.



