

ಕೋಲಾರದ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ಡಾ. ರಾಜ್ಕುಮಾರ್ ಅವರ ಹೆಸರಿಡುವಂತೆ ಕೋರಿ ಶ್ರೀನಿವಾಸಪುರದ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷ ಎಸ್.ಎಂ.ಶ್ರೀನಿವಾಸ್, ಕಾರ್ಯದರ್ಶಿ ಎಸ್.ಎಚ್.ನಾರಾಯಣಮೂರ್ತಿ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.
ಒಳಾಂಗಣ ಕ್ರೀಡಾಂಗಣಕ್ಕೆ ಡಾ.ರಾಜ್ಕುಮಾರ್ ಹೆಸರಿಡಲು ಆಗ್ರಹ
ಶ್ರೀನಿವಾಸಪುರ: ಕೋಲಾರದ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ವರನಟ ಹಾಗೂ ಯೋಗಪಟು ಡಾ. ರಾಜ್ಕುಮಾರ್ ಅವರ ಹೆಸರಿಡುವಂತೆ ಕೋರಿ ಶ್ರೀನಿವಾಸಪುರದ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ಅಧ್ಯಕ್ಷ ಎಸ್.ಎಂ.ಶ್ರೀನಿವಾಸ್, ಕಾರ್ಯದರ್ಶಿ ಎಸ್.ಎಚ್.ನಾರಾಯಣಮೂರ್ತಿ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.
ಡಾ. ರಾಜ್ಕುಮಾರ್ ಅವರು ಈ ಹಿಂದೆ ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಆರ್ಥಿಕ ಶಕ್ತಿ ತುಂಬಲು ಮೂರು ಬಾರಿ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ನಾಡಿನ ಕಲಾ ಹಾಗೂ ಸಾಂಸ್ಕøತಿಕ ಕ್ಷೇತ್ರಕ್ಕೆ ಅವರ ಕೊಡುಗೆ ದೊಡ್ಡದು. ಜಿಲ್ಲಾ ಕ್ರೀಡಾಂಗನ ನಿರ್ಮಾಣ ಮಾಡುವ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳು ಕ್ರೀಡಾಂಗಣಕ್ಕೆ ಡಾ. ರಾಜ್ಕುಮಾರ್ ಅವರ ಹೆಸರು ಇಡುವಂತೆ ಮನವಿ ಮಾಡಿದ್ದರು. ಆದರೆ ಜಿಲ್ಲಾಡಳಿತ ಈಗಾಗಲೇ ಸರ್.ಎಂ.ವಿಶ್ವೇಶ್ವರಯ್ಯ ಅವರ ಹೆಸರನ್ನಿಡಲು ನಿರ್ಧರಿಸಲಾಗಿರುವುದರಿಂದ, ಜೀನಿಯರ್ ಕಾಲೇಜು ಸಮೀಪ ನಿರ್ಮಿಸುವ ಮಿನಿ ಕ್ರೀಡಾಂಗಣಕ್ಕೆ ಡಾ. ರಾಜ್ ಕುಮಾರ್ ಅವರ ಹೆಸರನ್ನು ಇಡುವುದಾಗಿ ಭರವಸೆ ನೀಡಿತ್ತು. ಕನ್ನಡ ಪರ ಸಂಘಟನೆಗಳು ಜಿಲ್ಲಾಡಳಿತದ ಮಾತನ್ನು ಒಪ್ಪಿದ್ದವು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಈಗ ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದ ಪಕ್ಕದ ಮಿನಿ ಕ್ರೀಡಾಂಗಣದಲ್ಲಿ ಜಿಲ್ಲಾ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ. ಆ ಕ್ರೀಡಾಂಗಣಕ್ಕೆ ಕಲಾ ತಪಸ್ವಿ, ಕರ್ನಾಟಕ ರತ್ನ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪುರಸ್ಕøತ ಯೋಗಪಟು ಡಾ. ರಾಜ್ಕುಮಾರ್ ಅವರ ಹೆಸರನ್ನು ಇಡಬೇಕು ಎಂದು ಒತ್ತಾಯಪೂರ್ವಕ ಮನವಿ ಮಾಡಲಾಗಿದೆ.

