

ಬೆಂಗಳೂರು : ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಪ್ರತಿ ವರ್ಷ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿಯ ಪುರಸ್ಕೃತರ ಪಟ್ಟಿ ಪ್ರಕಟಗೊಂಡಿದೆ. 2025-26ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಶಿಕ್ಷಕಿ ಶ್ರೀಮತಿ ಇಶ್ರತ್ ಫಾತಿಮ ಅವರಿಗೆ ಈ ಗೌರವ ದೊರಕಿದೆ.
ಶ್ರೀಮತಿ ಇಶ್ರತ್ ಫಾತಿಮ ಅವರು ಗಫೂರ್ ಖಾನ್ ಲೇಔಟ್ನ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬೋಧನಾ ಕ್ಷೇತ್ರದಲ್ಲಿ ತಮ್ಮ ಶ್ರದ್ಧೆ, ತ್ಯಾಗ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿರುವ ಇವರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ನಿರಂತರ ಶ್ರಮಿಸುತ್ತಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾದ ಇಶ್ರತ್ ಫಾತಿಮ ಅವರಿಗೆ ಶಿಕ್ಷಣ ಇಲಾಖೆ, ಸಹೋದ್ಯೋಗಿಗಳು, ಪೋಷಕರು ಹಾಗೂ ಸ್ಥಳೀಯರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

