

ಕೋಲಾರ : ಅಲ್ಪಸಂಖ್ಯಾತರ ಸಮುದಾಯಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದ ಮೂಲ ಸೌಲಭ್ಯ ಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಗಳಡಿ ಅಲ್ಪಸಂಖ್ಯಾತರಿಗಾಗಿ ಇರುವ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ನಿರ್ದೇಶನ ನೀಡಿದರು.
ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದು, ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ಕಾರ್ಯಕ್ರಮ ತಲುಪಿಸುವುದು, ಆರ್ಥಿಕ ಚಟುವಟಿಕೆ ಬಲಪಡಿಸಲು ಸಾಲ ಸೌಲಭ್ಯ ಕಲ್ಪಿಸುವುದು. ನಾಗರಿಕ ಸೇವೆಗಳ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು, ವಸತಿ ಯೋಜನೆ, ಅಲ್ಪಸಂಖ್ಯಾತರ ಜೀವನ ಮಟ್ಟ ಸುಧಾರಿಸಲು ವಸತಿ ಯೋಜನೆ ಕಲ್ಪಿಸುವುದು. ಹೀಗೆ ಹಲವು ಕಾರ್ಯಕ್ರಮಗಳನ್ನು ಅಲ್ಪಸಂಖ್ಯಾತರಿಗೆ ತಲುಪಿಸುವಂತೆ ನಿರ್ದೇಶನ ನೀಡಿದರು.
ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರವು ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತರುತಿದ್ದು ಅಧಿಕಾರಿಗಳು ಅದನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಮಾಡಬೇಕಾಗಿದೆ ಸಮಿತಿಯನ್ನು ರಚಿಸಿದ್ದು ಅವರೊಂದಿಗೂ ಅಧಿಕಾರಿಗಳು ಸೇರಿ ಯೋಜನೆಗಳನ್ನು ಅನುಷ್ಠಾನ ಗೊಳಿಸಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ ಮಾಹಿತಿ ನೀಡಿ 197 ಅಂಗನವಾಡಿ ಕೇಂದ್ರಗಳಿದ್ದು ಇಲಾಖೆಯಿಂದ ಪೂರಕ ಪೌಷ್ಠಿಕ ಆಹಾರ ಕಲ್ಪಿಸುವುದು, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಪ್ರಧಾನಮಂತ್ರಿ ಅವರ ಮಾತೃವಂದನಾ ಯೋಜನೆ ತಲುಪಿಸುವುದು ಸೇರಿದಂತೆ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸುಮಾ ಮಾಹಿತಿ ನೀಡಿ ಕೃಷಿ ಇಲಾಖೆ ಸೂಕ್ಷ್ಮ ನೀರಾವರಿ, ಕೃಷಿ ಯಾಂತ್ರೀಕರಣ, ಬಿತ್ತನೆ ಬೀಜ ವಿತರಣೆ ಹೀಗೆ ಹಲವು ಕಾರ್ಯಕ್ರಮ ತಲುಪಿಸಲಾಗುತ್ತಿದೆ ಎಂದರು.
ತೋಟಗಾರಿಕೆ ಇಲಾಖೆ ಅಧಿಕಾರಿ ಮಾತನಾಡಿ ಇಲಾಖೆಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆ, ಹನಿ ನೀರಾವರಿ ಯೋಜನೆ, ಜೇನು ಸಾಕಾಣಿಕೆ, ಅನುಷ್ಠಾನ ಸಹಾಯಧನ ಹೀಗೆ ಹಲವು ಯೋಜನೆ ತಲುಪಿಸಲಾಗುತ್ತಿದೆ ಎಂದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿ ಶಿರಿನ್ ತಾಜ್ ಮಾಹಿತಿ ನೀಡಿ ಶ್ರಮಶಕ್ತಿ, ಸ್ವಾವಲಂಭಿ ಸಾರಥಿ, ವೃತ್ತಿ ಪ್ರೋತ್ಸಾಹ, ಅರಿವು,ವಿದೇಶಿ ವಿದ್ಯಾಭ್ಯಾಸ,ನೇರಸಾಲ ಯೋಜನೆ, ಉನ್ನತ ಶಿಕ್ಷಣಕ್ಕೆ ಸಾಲ ಯೋಜನೆ ಹೀಗೆ ಹಲವು ಯೋಜನೆ ತಲುಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಮುರಾರ್ಜಿ ದೇಸಾಯಿ ವಸತಿ ಶಾಲೆಗಳು 3, ಮೌಲನಾ ಆಜಾದ್ ವಸತಿ ಶಾಲೆಗಳ 8 ಅಭಿವೃದ್ಧಿ ಸಂಬಂಧಿಸಿದಂತೆ ಮಾತನಾಡಿ ದಾಖಲಾತಿಗಳ ಬಗ್ಗೆ ಮಾಹಿತಿ ನೀಡಿದರು.
ಅಲ್ಪಸಂಖ್ಯಾತರ ಇಲಾಖೆಯ ಶಾಲೆಗಳಲ್ಲಿ ಈಗಾಗಲೇ ದಾಖಲಾತಿಗಳು ಪ್ರಾರಂಭವಾಗಿದ್ದು ಕೊನೆಯ ದಿನಾಂಕ ಮುಗಿಯುವುದರೊಳಗೆ ಇರುವಂತಹ ಬಾಕಿ ಇರುವಂತಹ ದಾಖಲಾತಿಯನ್ನು ಸಮುದಾಯದ ಮುಖಂಡರೊಂದಿಗೆ ಅರಿವು ಮೂಡಿಸಿ ದಾಖಲಾತಿ ಪೂರ್ಣಗೊಳಿಸಬೇಕು ಎಂದರು.
ಇಲಾಖೆಯ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಇಲ್ಲವಾ ಎಂಬುದನ್ನು ಸಮಿತಿಯ ಸದಸ್ಯರು ಗಮನವಹಿಸಬೇಕು ಎಂದು ತಿಳಿಸಿದರು.
ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ 5.5 ಕೋಟಿ ರೂಪಾಯಿ ಕಾಮಗಾರಿ ನಡೆಯುತ್ತಿದ್ದು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಅಸ್ಥಾಂತರ ಮಾಡಲಾಗುವುದು ಎಂದು ತಿಳಿಸಿದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಅಂಬಿಕಾ ಸ್ಥಳೀಯ ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯಧನ ನೀಡಲಾಗಿದೆ, ಶಸ್ತ್ರ ಚಿಕಿತ್ಸೆಗೆ ಸಹಾಯಧನ, ವೈದ್ಯಕೀಯ ಧನ,ಲಘು ವಾಹನ ಚಾಲನಾ ತರಬೇತಿ, ಇತರೆ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದರು ಅಲ್ಪಸಂಖ್ಯಾತರಿಗೆ ಮೀಸಲು ಇಟ್ಟಿರುವಂತಹ ಅನುದಾನವನ್ನು ಅವರಿಗೆ ಮಾತ್ರ ಪೂರ್ಣ ಬಳಕೆಯಲ್ಲಿ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಮುಖ್ಯಮಂತ್ರಿ ಕೌಶಲ್ಯಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು 200 ಅಭ್ಯರ್ಥಿಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.
ವಕ್ಸ್ ಮಂಡಳಿ ಕಚೇರಿಯನ್ನು ಕೋಲಾರ ನಗರದ ಕ್ಲಾಕ್ ಟವರ್ ಬಳಿಗೆ ಸ್ಥಳಾಂತರ ಮಾಡಬೇಕು ಎಂದು ಸಮಿತಿಯ ಸದಸ್ಯರು ಮನವಿ ಮಾಡಿದಾಗ ಜಿಲ್ಲಾಧಿಕಾರಿಗಳು ಶೀಘ್ರದಲ್ಲಿಯೇ ತಮ್ಮ ವಕ್ಸ್ ಮಂಡಳಿತ ಕಚೇರಿಯನ್ನು ನವೀಕರಣಗೊಳಿಸಿ ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರವನ್ನು ಅಲ್ಲೇ ಪ್ರಾರಂಭ ಮಾಡುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಮೈಲಾರಪ್ಪ, ತೋಟಗಾರಿಕಾ ಇಲಾಖೆ ಕುಮಾರಸ್ವಾಮಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಜೋಶಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ರೀನಿವಾಸ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ರಮೇಶ್, ರೇಷ್ಮೆ ಇಲಾಖೆಯ ಆಂಜನೇಯರೆಡ್ಡಿ, ಡಿ.ಐ.ಸಿ ಜಂಟಿ ನಿರ್ದೇಶಕರಾದ ರಫೀಕ್, ಜಿಲ್ಲಾ ಹಣಕಾಸು ಸಂಸ್ಥೆ, ಸೇರಿದಂತೆ ಸಮಿತಿಯ ಸದಸ್ಯರಾದ ಶಪೀಕ್ ಅಹಮ್ಮದ್, ಶಬ್ಬೀರ್ ಅಹ್ಮದ್ ಪಾಷ , ಇನಾಯತ್ತುಲ್ಲ ಷರೀಫ್, ಇಂದಿರಾ ಮತಿ, ಮಹಬೂಬ್, ಜಗದೀಶ್,ಸೇರಿದಂತೆ ಇತರರು ಇದ್ದರು.


