

ಕರ್ನಾಟಕ ರಾಜ್ಯ ಸರ್ಕಾರವು ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ಉದ್ದೇಶವು ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು 2000 ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದು. ಇತ್ತೀಚಿನ ದಿನಗಳಲ್ಲಿ ಈ ಯೋಜನೆಯ ಹಣದ ವಿತರಣೆಯಲ್ಲಿ ವಿಳಂಬವಾಗಿದ್ದು, ಇದೀಗ ದೀಪಾವಳಿ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆ ಆಗಲಿದ್ದು ಹಬ್ಬಕ್ಕೆ ಮಹಿಳೆಯರ ಖಾತೆಗೆ 2000 ರೂ. ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ
ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಜುಲೈ ತಿಂಗಳು ಕಂತು ಸಂದಾಯ ಮಾಡಲಾಗಿದೆ. ಇದೀಗ ದೀಪಾವಳಿ ಹೊತ್ತಿಗೆ ಆಗಸ್ಟ್ ತಿಂಗಳು ಕಂತಿನ ಹಣ ಫಲಾನುಭವಿ ಮಹಿಳೆಯರ ಖಾತೆಗೆ ವರ್ಗಾವಣೆ ಆಗಲಿದೆ ಎಂದು ಹೇಳಿದ್ದಾರೆ.

