

ಶ್ರೀನಿವಾಸಪುರ : ಕನ್ನಡ ನಾಡಿನ ಇತಿಹಾಸವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಉತ್ತಮ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಯಲ್ದೂರು ಹೋಬಳಿ ಘಟಕದ ನಿಕಟ ಪೂರ್ವ ಅಧ್ಯಕ್ಷ ಕೆ ಪ್ರಕಾಶಯ್ಯ ತಿಳಿಸಿದರು.
ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಹೈಸ್ಕೂಲ್ ರಂಗಮಂದಿರದಲ್ಲಿ ಕರವೇ ಹೋಬಳಿ ಘಟಕ ಖಾಸಪ ಹೋಬಳಿ ಘಟಕ ಹಾಗೂ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಕನ್ನಡ ನಾಡಿನ ಪರಂಪರೆ ಬಹಳ ಶ್ರೀಮಂತವಾಗಿದೆ. ಕನ್ನಡ ರಾಜ್ಯೋತ್ಸವದಂತಹ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚಾಗಿ ಶಾಲಾ-ಕಾಲೇಜುಗಳ ಮಟ್ಟದಲ್ಲಿ ಹಮ್ಮಿಕೊಳ್ಳುವುದರ ಮೂಲಕ ಕನ್ನಡ ನಾಡು ನುಡಿ ಸಾಹಿತ್ಯ ಆಚಾರ ವಿಚಾರಗಳ ಬಗ್ಗೆ ಪ್ರಚುರ ಪಡಿಸಬೇಕಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕರಾದ ಪಿ ಶ್ರೀನಿವಾಸ್ ಜಿ ಕೆ ಮುರಳಿ ಎಚ್ ನಾಗರತ್ನಮ್ಮ ಎಸ್ ಯಶೋಧ ಕರವೇ ಯಲ್ದೂರು ಹೋಬಳಿ ಘಟಕದ ಅಧ್ಯಕ್ಷ ಆರ್ ಅಮರೇಶ್ ಪ್ರಧಾನ ಕಾರ್ಯದರ್ಶಿ ಎಲ್ ಮುರಳಿ ಮೋಹನ್ ಕಸಾಪ ಹೋಬಳಿ ಘಟಕದ ಅಧ್ಯಕ್ಷ ಎಸ್ ಅನಿಲ್ ಕುಮಾರ್ ಸಹ ಶಿಕ್ಷಕರಾದ ಮಂಜುನಾಥ ದೇವೇಗೌಡ ಮಂಜುಳಾ ಅನುಷಾ ಭಾಗವಹಿಸಿದ್ದರು.

