

ಬೆಂಗಳೂರು : ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಪರ ಮುಖ್ಯ ಕಾರ್ಯನಿರ್ವಹಣಾಧಿಕಾರಿ (Additional CEO) ಹುದ್ದೆಗೆ ಹೊಸ ಹೆಚ್ಚುವರಿ ಪ್ರಭಾರ ನೀಡಿದೆ.
ಈ ಕುರಿತ ಅಧಿಸೂಚನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಇಲಾಖೆ ಪ್ರಕಟಿಸಿದೆ.
ಸರ್ಕಾರದ ಅಧಿಸೂಚನೆ ಸಂಖ್ಯೆ MWD-WES/20/2025, ದಿನಾಂಕ 16.08.2025ರ ಮೂಲಕ ವಕ್ಫ್ ಮಂಡಳಿಯ ಅಪರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಚ್ಚುವರಿ ಪ್ರಭಾರದಲ್ಲಿದ್ದ ಮನ್ಸೂರ್ ಬಾಷ, ಉಪ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಇವರ ಬದಲಿಗೆ ಇದೀಗ ಹೊಸ ಬದಲಾವಣೆ ಜಾರಿಗೊಂಡಿದೆ.
ಈಗಿನಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಡಾ// ಅಫ್ಜಲ್ ಪಾಷ ಅವರನ್ನು ವಕ್ಫ್ ಮಂಡಳಿಯ ಅಪರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಹೆಚ್ಚುವರಿ ಪ್ರಭಾರ ನೀಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

